CHITRADURGA NEWS | 05 AUGUST 2026
ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ 2026ರ ಆಗಸ್ಟ್ ತಿಂಗಳು ಪೂರ್ತಿ ಶೇ.50ರಷ್ಟು ಬಂಪರ್ ರಿಯಾಯಿತಿ ಘೋಷಿಸಲಾಗಿದೆ.
ಇದನ್ನೂ ಓದಿ: ನಗರಸಭೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಪುಸ್ತಕ ಪ್ರಿಯರಿಗೆ ಅಪರೂಪದ ಕೃತಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಧಿಕಾರವು ಈ ವಿಶೇಷ ರಿಯಾಯಿತಿ ಸೌಲಭ್ಯ ಒದಗಿಸಿದ್ದು, ಸಾಹಿತ್ಯಾಸಕ್ತರು ಇದರ ಸೌಲಭ್ಯ ಪಡೆಯುವಂತೆ ಕೋರಲಾಗಿದೆ.
ಬೆಂಗಳೂರಿನ ಕನ್ನಡ ಭವನದ ‘ಸಿರಿಗನ್ನಡ’ ಪುಸ್ತಕ ಮಳಿಗೆ, ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ‘ಸಿರಿಗನ್ನಡ’ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ಲಭ್ಯವಿರಲಿದೆ.
ಅಲ್ಲದೆ, ಪ್ರಾಧಿಕಾರದ ಅಧಿಕೃತ ವೆಬ್‍ಸೈಟ್ https://kpp.karnataka.gov.in ಮೂಲಕ ಆನ್‍ಲೈನ್‍ನಲ್ಲೂ ಶೇ. 50ರ ರಿಯಾಯಿತಿಯೊಂದಿಗೆ ಪುಸ್ತಕಗಳನ್ನು ಖರೀದಿಸಬಹುದಾಗಿದೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರವು ಇದುವರೆಗೆ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ ಹಾಗೂ ಕೃಷಿ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಸುಮಾರು 769 ಶೀರ್ಷಿಕೆಗಳನ್ನು ಪ್ರಕಟಿಸಿದೆ.
ಇದನ್ನೂ ಓದಿ: ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ
ಅತ್ಯಂತ ಮೌಲಿಕವಾದ ಹಾಗೂ ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಸುಲಭ ಬೆಲೆಯಲ್ಲಿ ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

