CHITRADURGA NEWS | 15 AUGUST 2025
ಚಿತ್ರದುರ್ಗ: ಎಸ್.ಜೆ.ಎಂ. ಕ್ಯಾಂಪಸ್ ಆವಣರದಲ್ಲಿ ಎಸ್.ಜೆ.ಎಂ. ಸಮೂಹ ಸಂಸ್ಥೆಗಳ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ ಆಚರಣೆ ಮಾಡಲಾಯಿತು. ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ: ವಾರ್ತಾ ಇಲಾಖೆ | ಪತ್ರಕರ್ತರ ವಾಹನ ಹಸ್ತಾಂತರಿಸಿದ ಸಚಿವ ಡಿ.ಸುಧಾಕರ್
ಸಂಸ್ಥೆಯ ಶಾಲಾಕಾಲೇಜುಗಳ 22 ತಂಡಗಳಿಂದ ಆಕರ್ಷಕವಾದ ಪಥಸಂಚಲನ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳ ನೃತ್ಯಗಳನ್ನು ಪ್ರದರ್ಶಿಸಿದರು.
ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶೈಕ್ಷಣಿಕ ಅಧಿಕಾರಿ ಎನ್.ಚಲುವರಾಜ್, ಎಸ್.ಜೆಎಂ. ಸಂಸ್ಥೆಗಳ ಮುಖ್ಯಸ್ಥರುಗಳು ಹಾಗೂ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ವಯೋನಿವೃತ್ತರಾದವರಿಗೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದವರನ್ನು, ಪಿಹೆಚ್.ಡಿ. ಪದವೀಧರರನ್ನು, ರ‍್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ: ರಸ್ತೆ ಅಗಲೀಕರಣ ಶತಃಸಿದ್ಧ | ಮೆಡಿಕಲ್ ಕಾಲೇಜು ಹೊಸ ಡಿಸಿ ಆಫೀಸಿಗೆ | ಸಚಿವ ಸುಧಾಕರ್ ಮಹತ್ವದ ಸಭೆ
ಆಕರ್ಷಕ ಪಥಸಂಚಲನ ಮಾಡಿದ ಪ್ರೌಢಶಾಲೆ ವಿಭಾಗದಿಂದ ಎಸ್.ಜೆ.ಎಂ. ಆಂಗ್ಲಮಾಧ್ಯಮ ಶಾಲೆ- ಪ್ರಥಮ, ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ ಸ್ಕೌಟ್ಸ್ ಮತ್ತು ಗೈಡ್ಸ್ – ದ್ವಿತೀಯ, ಪ್ರಿಯದರ್ಶಿನಿ ಪ್ರೌಢಶಾಲೆ – ತೃತೀಯ.
ಪದವಿ ವಿಭಾಗದಿಂದ ಎಸ್.ಜೆ.ಎಂ. ಫಾರ್ಮಸಿ ಕಾಲೇಜು – ಪ್ರಥಮ, ಎಸ್.ಜೆ.ಎಂ. ಸ್ವತಂತ್ರ ಪದವಿಪೂರ್ವ ಕಾಲೇಜು -ದ್ವಿತೀಯ, ಎಸ್.ಜೆ.ಎಂ. ನರ್ಸಿಂಗ್ ಕಾಲೇಜು – ತೃತೀಯ ಸ್ಥಾನ ಪಡೆದು ಬಹುಮಾನ ಪಡೆದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
