By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    1 minute ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    12 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    12 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 minutes ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    55 minutes ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    24 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
Reading: ಸ್ವಾತಂತ್ರ್ಯ ದಿನಾಚರಣೆ | ಸಚಿವ ಸುಧಾಕರ್ ಧ್ವಜಾರೋಹಣ | ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ | ಸಚಿವ ಸುಧಾಕರ್ ಧ್ವಜಾರೋಹಣ | ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ

News Desk Chitradurga News
Last updated: 15 August 2025 13:04
News Desk Chitradurga News
11 months ago
Share
SHARE

CHITRADURGA NEWS | 15 August 2025

ಚಿತ್ರದುರ್ಗ: ದೇಶದ ಇತಿಹಾಸದಲ್ಲಿಯೇ ಮೊದಲು ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ನಿರ್ಗತಿಕರು, ಬಡವರು, ಕೆಳವರ್ಗದವರು, ಸಮಾಜದ ಅಂಚಿನಲ್ಲಿರುವವರು ಹಾಗೂ ಮಹಿಳೆಯರ ಆರ್ಥಿಕವಾಗಿ ಸಬಲೀಕರಣಕ್ಕೆ ಸಹಾಯಕವಾಗಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇದನ್ನೂ ಓದಿ: ದಿನ ಭವಿಷ್ಯ | ಆಗಸ್ಟ್ 15 | ಕೈಗೊಂಡ ಕೆಲಸದಲ್ಲಿ ಅಡೆತಡೆ, ಹೊಸ ವಾಹನ ಯೋಗ

ನಗರದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾದ 79ನೇ ಸ್ವಾತಂತ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿಗಳು ಪ್ರತಿಯೊಬ್ಬರು ಸಮಾಜದಲ್ಲಿ ಘನತೆಯಿಂದ ಬದುಕಲು ದಾರಿ ಮಾಡಿಕೊಟ್ಟಿವೆ. ರಾಷ್ಟ್ರಕವಿ ಕುವೆಂಪು ಅವರ “ಬಡತನವ ಬುಡಮಟ್ಟ ಕೀಳಬನ್ನಿ” ಎನ್ನುವ ಆಶಯವನ್ನು ಸಾಕರಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಬಡತನ ನಿವಾರಣೆ, ಉದ್ಯೋಗ ಅವಕಾಶ ಹೆಚ್ಚಿಸಲು ಪ್ರನಾಳಿಕೆಯಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿ ಮಾಡಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿಯೋಜನೆ, ಗೃಹಜ್ಯೋತಿ, ಯುನಿಧಿ ಯೋಜನೆಗಳು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ.ಅನ್ನಭಾಗ್ಯ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಬಿ.ಪಿ.ಎಲ್. ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ ರೂ.170/- ರಂತೆ ಡಿ.ಬಿ.ಟಿ ಮೂಲಕ ಜುಲೈ 2023 ರಿಂದು ಡಿಸೆಂಬರ್-2024 ರವರೆಗೆ ಒಟ್ಟು ರೂ.370.01 ಕೋಟಿ ಹಣವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಪಾವತಿ ಮಾಡಲಾಗಿದೆ. ಜೊತೆಗೆ ಪ್ರತಿ ಸದಸ್ಯರಿಗೆ ಡಿ.ಬಿ.ಟಿ ಹಣದ ಬದಲಾಗಿ ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಫಲಾನುಭವಿಗಳಿಗೆ ಹೆಚ್ಚುವರಿ 05 ಕೆ.ಜಿ ಯಂತೆ ಪ್ರತಿ ಮಾಹೆಗೆ 6313 ಮೆಟ್ರಿಕ್ ಟನ್ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ವಿದ್ಯುತ್ ಸಂಪರ್ಕ | ಲಂಚ ಬೇಡಿಕೆ ಇಟ್ಟರೆ ದೂರು ನೀಡಿ 

ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,78,367 ಫಲಾನುಭವಿಗಳಿದ್ದು, ಈವರೆಗೆ ಒಟ್ಟು ರೂ.343.87 ಕೋಟಿ ವ್ಯಯ ಮಾಡಲಾಗಿದೆ. ಮಹಿಳೆಯರ ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಮೇ 2025ರ ಅಂತ್ಯದವರೆಗೆ ಒಟ್ಟು 3,87,490 ಫಲಾನುಭವಿಗಳಿಗೆ ರೂ.1,398 ಕೋಟಿ ರೂಪಾಯಿಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಿದ ಫಲವಾಗಿ ಜಿಲ್ಲೆಯಲ್ಲಿ 28 ಜನ ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ.

ಯುವನಿಧಿ ಯೋಜನೆಯಡಿಯಲ್ಲಿ ಜನವರಿ 2024 ರಿಂದ ಮೇ-2025ರವರೆಗೆ ಒಟ್ಟು ರೂ.15 ಕೋಟಿ ಯುವ-ನಿರುದ್ಯೋಗಿಗಳ ಖಾತೆಗೆ ನೇರಪಾವತಿ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲಾ ವಿಭಾಗದ ಸರ್ಕಾರಿ ಬಸ್‌ಗಳಲ್ಲಿ 5 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದಾರೆ. ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು ರೂ. 208 ಕೋಟಿ ರೂಪಾಯಿ ಖರ್ಚುಮಾಡಲಾಗಿದೆ ಎಂದು ಸಚಿವ ಡಿ.ಸುಧಾಕರ್ ಮಾಹಿತಿ ನೀಡಿದರು.

ಶೀಘ್ರ 296‌ ಕಂದಾಯ ಗ್ರಾಮ ಘೋಷಣೆ: ಹಕ್ಕು ಪತ್ರಗಳ ವಿತರಣೆ

ಜಿಲ್ಲೆಯಲ್ಲಿ ಜನವಸತಿ ಇರುವ 296 ಗ್ರಾಮಗಳಿಗೆ ಕಂದಾಯ ಗ್ರಾಮದ ಮಾನ್ಯತೆ ನೀಡಲು ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ವಾಸಿಸುವ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗುವುದು. ಈಗಾಗಲೇ 5174 ಫಲಾನುಭವಿಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ 7976 ಹಕ್ಕು ಪತ್ರಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.

ಇದನ್ನೂ ಓದಿ: ಉಪ ಸಮಿತಿ ಬೇಡ, ಒಳಮೀಸಲು ಜಾರಿ ಮಾಡಿ | ಮಾದಾರ ಚನ್ನಯ್ಯ ಶ್ರೀ

ಮಹತ್ವಾಂಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸುವಂತೆ ಈಗಾಗಲೇ ಶಿಫಾರಸ್ಸು ಮಾಡಲಾಗಿರುತ್ತದೆ. ಈ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ, ಹೊಳಲ್ಕೆರೆ ತಾಲ್ಲೂಕುಗಳಡಿಯಲ್ಲಿನ ಒಟ್ಟು 73,946 ಹೆಕ್ಟೇರ್ ಪ್ರದೇಶಕ್ಕೆ ಹನಿನೀರಾವರಿ ಮೂಲಕ ನೀರೊದಗಿಸಲು ಹಾಗೂ 86 ಕೆರೆಗಳಿಗೆ ಕುಡಿಯುವ ನೀರು ಪೂರೈಸಲು ರೂ. 2677 ಕೋಟಿಗಳ ವೆಚ್ಚದಲ್ಲಿ 06 ಪ್ಯಾಕೇಜ್‌ಗಳಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬರದ ನಾಡು ಚಿತ್ರದುರ್ಗ ಕೃಷಿಯ ನಾಡಾಗಿ ಬದಲಾಗಿಸಲು ನಮ್ಮ ಸರ್ಕಾರ ಕಂಕಣಬದ್ಧವಾಗಿದೆ.

ರಾಜ್ಯದ ಸಮಗ್ರ ಅಭಿವೃದ್ಧಿ ಅದರಲ್ಲೂ ಗ್ರಾಮೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ವಿದ್ಯಾಭ್ಯಾಸಕ್ಕೆ ಆದ್ಯತೆಯನ್ನು ನೀಡುತ್ತಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲ ಚೇತನ ಮಾಶಾಸನ ಜೊತೆಗೆ ಮಾತೃಪೂರ್ಣ ಯೋಜನೆ, ಪೋಷಣೆ ಅಭಿಯಾನ ಯೋಜನೆ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಸ್ವಾಧಾರ ಯೋಜನೆ, ಸಾಂತ್ವನ ಯೋಜನೆಗಳ ಮುಖಾಂತರ ಎಲ್ಲ ವರ್ಗದವರ ಏಳಿಗೆಗಾಗಿ ನಮ್ಮ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಇದೇ ವೇಳೆ ಸಚಿವ ಡಿ.ಸುಧಾಕರ್ ತುರವನೂರು ಗ್ರಾಮದಲ್ಲಿ ನಡೆದ ಈಚಲು ಮರದ ಸತ್ಯಾಗ್ರಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಮಹನೀಯರ ಕೊಡಿಗೆಗಳನ್ನು ಸ್ಮರಿಸಿದರು.

ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರಾದ ಕೂನಬೇವು ಗ್ರಾಮದ ಎನ್.ಭೀಮಪ್ಪಗೆ ಸನ್ಮಾನ

ಸಶಸ್ತ್ರ ಮೀಸಲು ಪಡೆ , ನಾಗರೀಕ ಪೊಲೀಸ್, ಗೃಹ ರಕ್ಷಕ , ಅಬಕಾರಿ , ಅರಣ್ಯ ಇಲಾಖೆ ತುಕಡಿಗಳು ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳ ತಂಡ, ಪೊಲೀಸ್ ಬ್ಯಾಂಡ್ ಸ್ವಾತಂತ್ರ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೋಟೆ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ವಿದ್ಯಾರ್ಥಿಗಳು ಪಹಲ್ಗಾಮ್ ಉಗ್ರರ ದಾಳಿ ಹಾಗೂ ಇದಕ್ಕಾಗಿ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆ ಕುರಿತ ನೃತ್ಯ ರೂಪಕ ಪ್ರಸ್ತುತ ಪಡಿಸಿದರು.

ಎಸ್.ಜೆ.ಎಂ.ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹರ್ ಘರ್ ತಿರಂಗಾ ನೃತ್ಯ ಪ್ರದರ್ಶಿಸಿದರು. ಡಿ.ಎಸ್.ಹಳ್ಳಿಯ ಜ್ಞಾನ ಪೂರ್ಣ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರೈತರು, ವಿಜ್ಞಾನಿಗಳು,ಯೋಧರು, ಕ್ರೀಡಾಪಟುಗಳು ಕೊಡುಗೆಯ ಮಹತ್ವ ಸಾರುವ ನೃತ್ಯ ರೂಪಕ ಪ್ರಸ್ತುತ ಪಡಿಸಿದರು.

ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸಿದ್ದರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಆ.22 ರಂದು ರಾಜ್ಯಮಟ್ಟದ ಯೋಗಾಸನ ಚಾಂಪಿಯನ್ ಶಿಪ್ | ಪತ್ರಿಕಾಗೋಷ್ಠಿಯಲ್ಲಿ ಕೆ.ಸಿ.ವೀರೇಂದ್ರ(ಪಪ್ಪಿ) ವಿವರಣೆ

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ನಗರ ಸಭೆ ಆಯುಕ್ತೆ ರೇಣುಕಾ.ಎಂ, ತಹಶೀಲ್ದಾರ್ ಗೋವಿಂದರಾಜು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFlag HoistingIndependence Day celebrationsMinister Sudhakarಚಿತ್ರದುರ್ಗಚಿತ್ರದುರ್ಗ ನ್ಯೂಸ್ಧ್ವಜಾರೋಹಣಸಚಿವ ಸುಧಾಕರ್ಸ್ವಾತಂತ್ರ್ಯ ದಿನಾಚರಣೆ
Share This Article
Facebook Email Print
Previous Article ಉದ್ದ ಮತ್ತು ದಪ್ಪ ಕೂದಲು ಪಡೆಯಲು, ಈ ಕಪ್ಪು ಬೀಜಗಳನ್ನು ರೋಸ್‍ ವಾಟರ್‍ನಲ್ಲಿ ಬೆರೆಸಿ ಕೂದಲಿಗೆ ಹಚ್ಚಿ
Next Article ರಸ್ತೆ ಅಗಲೀಕರಣ ಶತಃಸಿದ್ಧ | ಮೆಡಿಕಲ್ ಕಾಲೇಜು ಹೊಸ ಡಿಸಿ ಆಫೀಸಿಗೆ | ಸಚಿವ ಸುಧಾಕರ್ ಮಹತ್ವದ ಸಭೆ
Leave a Comment

Leave a Reply Cancel reply

Your email address will not be published. Required fields are marked *

ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
today bhavishya
ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
Dina Bhavishya
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up