
CHITRADURGA NEWS | 15 AUGUST 2025
ಹೊಳಲ್ಕೆರೆ: ಪಟ್ಟಣದ ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಸಕ ಡಾ.ಎಂ.ಚಂದ್ರಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ | ಸಚಿವ ಸುಧಾಕರ್ ಧ್ವಜಾರೋಹಣ | ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ

ನಂತರ ಮಾತನಾಡಿ, ಶಕ್ತಿಶಾಲಿ ಕ್ಷಿಪಣಿಗಳನ್ನು ಹೊಂದಿರುವ ಭಾರತ ಬಲಿಷ್ಠ ರಾಷ್ಟ್ರಗಳ ಜೊತೆ ಪೈಪೋಟಿ ನೀಡುವಷ್ಟರಮಟ್ಟಿಗೆ ಬೆಳೆದಿದೆ ಎಂದು ಹೇಳಿದರು.
ಎಸ್.ಎಸ್.ಎಲ್.ಸಿ.ಯಲ್ಲಿ 625 ಕ್ಕೆ ಆರು ನೂರು ಅಂಕ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಐದು ನೂರಕ್ಕೆ ಐದು ನೂರು ಅಂಕಗಳನ್ನು ಪಡೆಯುವ ಪ್ರತಿ ವಿದ್ಯಾರ್ಥಿಗೆ ತಲಾ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ಕೊಟ್ಟರು.
ಹೊಳಲ್ಕೆರೆ ಪಟ್ಟಣ ಸೇರಿದಂತೆ ಮೂರು ಕಡೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆಯಲಾಗುವುದು. ಒಂದೊಂದು ಶಾಲೆಗೆ 10 ಕೋಟಿ ರೂ.ಗಳನ್ನು ಖರ್ಚು ಮಾಡಿ ಗುಣಮಟ್ಟದ ಕಟ್ಟಡ ಕಟ್ಟಲಾಗುವುದು. ಡಾಂಬರ್ ರಸ್ತೆಗಳನ್ನು ಕಿತ್ತು ಸಿ.ಸಿ.ರಸ್ತೆಗಳ ನಿರ್ಮಾಣಕ್ಕೆ 850 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದೆಂದರು.
ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಬಿ.ಎ.ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಮತ್ತು ಹತ್ತನೆ ತರಗತಿಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಐವತ್ತು ಸಾವಿರ ರೂ.ಗಳನ್ನು ನೀಡಿ ಶುಭ ಹಾರೈಸಿದರು.
ಇದನ್ನೂ ಓದಿ: SJM ಕ್ಯಾಂಪಸ್‌ನಲ್ಲಿ ಸ್ವಾತಂತ್ರ‍್ಯ ದಿನಾಚರಣೆ | ಶಿವಯೋಗಿ ಸಿ.ಕಳಸ ಧ್ವಜಾರೋಹಣ
ತಾಲ್ಲೂಕಿನ ಎಂಟು ಟಾಪರ್ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ.ಗಳ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೊರಲಗುಂದಿ ವಿಜಯಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಿಶ್ವನಾಥ, ಪುರಸಭೆ ಮುಖ್ಯಾಧಿಕಾರಿ ಫಿರೋಜ್‍ಖಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಶಪ್ಪ, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ, ಸದಸ್ಯರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
