CHITRADURGA NEWS | 04 MARCH 2026
ಚಿತ್ರದುರ್ಗ: ಭಾರತ ಜನಗಣತಿ 2027ರ ಪೂರ್ವಸಿದ್ಧತಾ ಕಾರ್ಯಗಳು ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಗಣತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಜನಗಣತಿ ಅಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಮಾದಿಗ ಸಮುದಾಯದ ಮುಖಂಡರಿಂದ ಬೆಂಗಳೂರಿನ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಭೇಟಿ | ಒಳಮೀಸಲು ಅನ್ವಯಕ್ಕೆ ಮನವಿ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಭಾರತ ಜನಗಣತಿ-2027ರ ಸಂಬಂಧ ಜಿಲ್ಲಾ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜನಗಣತಿ ಕಾರ್ಯವು ಯಶಸ್ವಿಯಾಗಲು ಬ್ಲಾಕ್‍ಗಳ ರಚನೆ ಅತ್ಯಂತ ಪ್ರಮುಖವಾಗಿದೆ. ಬ್ಲಾಕ್ ರಚನೆಯಲ್ಲಿ ಸಣ್ಣ ತಪ್ಪುಗಳಾದರೂ ಇಡೀ ಪ್ರಕ್ರಿಯೆ ಹಳಿ ತಪ್ಪುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಬ್ಲಾಕ್‍ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವ ವಾರ್ಡ್ ಬಿಲ್ ಕಲೆಕ್ಟರ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದ ಅವರು, ಗಣತಿದಾರರನ್ನು ನೇಮಿಸುವಾಗ ಅವರು ವಾಸಿಸುವ ಅಥವಾ ಕೆಲಸ ಮಾಡುವ ಬ್ಲಾಕ್‍ಗಳಲ್ಲೇ ನಿಯೋಜಿಸಬೇಕು. ಒಂದು ವೇಳೆ ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯರು ಲಭ್ಯವಿಲ್ಲದಿದ್ದರೆ, 200 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಅಸಿಸ್ಟೆಂಟ್ ಹುದ್ದೆ | RBI ನಿಂದ ಅರ್ಜಿ ಅಹ್ವಾನ
ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿ ಅಂಕಿ-ಅಂಶಗಳು ಅಡಿಪಾಯವಾಗಿದ್ದು, ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು ರಾಷ್ಟ್ರ ನಿರ್ಮಾಣದ ಅಳಿಲು ಸೇವೆಯಲ್ಲಿ ಭಾಗಿಗಳಾಗುತ್ತಿದ್ದೇವೆ ಎಂಬ ಭಾವನೆಯೊಂದಿಗೆ ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ಕೆಲಸ ಮಾಡಬೇಕು.
ಸರ್ಕಾರಿ ನೌಕರರ ವೃತ್ತಿ ಜೀವನದಲ್ಲಿ ಚುನಾವಣೆ ಮತ್ತು ಜನಗಣತಿ ಕೆಲಸಗಳು ಅತ್ಯಂತ ಸ್ಮರಣೀಯವಾದವು. 1872ರಲ್ಲಿ ಮೊದಲ ಬಾರಿ ಆರಂಭವಾದ ಜನಗಣತಿ ಪ್ರಕ್ರಿಯೆ ಈಗ 16ನೇ ಜನಗಣತಿ ಹಂತಕ್ಕೆ ಬಂದು ನಿಂತಿದೆ. ಈ ಅಂಕಿ-ಅಂಶಗಳು ದೇಶದ ಆರ್ಥಿಕ ಗುರಿ ಮತ್ತು ಜನರ ಸ್ಥಿತಿಗತಿಗಳನ್ನು ತಿಳಿಯಲು ಬಹಳ ಮುಖ್ಯವಾಗಿದ್ದು, ನಿಖರತೆಯ ವಿಷಯದಲ್ಲಿ ಯಾವುದೇ ಅಜಾಗರೂಕತೆ ವಹಿಸಬಾರದು ಎಂದು ಎಚ್ಚರಿಸಿದರು.
ಕೋವಿಡ್ ಮಹಾಮಾರಿಯಿಂದಾಗಿ ಮುಂದೂಡಲ್ಪಟ್ಟಿದ್ದ ಈ ಜನಗಣತಿಯು ಈಗ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ನಡೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮರ್ಥವಾಗಿ ತರಬೇತಿ ಪಡೆದು ಕೆಲಸ ಆರಂಭಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 04 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಈ ಬಾರಿಯ ಜನಗಣತಿಯು ಹಳೆಯ ಮ್ಯಾನುಯಲ್ ಪದ್ಧತಿ ಕೈಬಿಟ್ಟು, ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದ್ದು, ಇದು ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಿಸಲಿದೆ. ಪ್ರತಿ ವಾರ್ಡ್ ಅಥವಾ ಗ್ರಾಮ ಮಟ್ಟದಲ್ಲಿ 150 ರಿಂದ 200 ಕುಟುಂಬಗಳನ್ನು ಒಳಗೊಂಡ ‘ಬ್ಲಾಕ್’ಗಳನ್ನು ಗುರುತಿಸಿ, ನಿಖರವಾದ ಬ್ಲಾಕ್ ನಕ್ಷೆ ಮತ್ತು ಪಟ್ಟಿಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದರು.
ಜನಗಣತಿ ಕಾರ್ಯಕ್ಕಾಗಿ ಎಣಿಕೆದಾರರು ಮತ್ತು ಮೇಲ್ವಿಚಾರಕರನ್ನು ಶೀಘ್ರವೇ ನೇಮಕ ಮಾಡಿ, ಅವರಿಗೆ ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲು ತಹಶೀಲ್ದಾರ್‍ಗಳಿಗೆ ನಿರ್ದೇಶನ ನೀಡಿದ ಅವರು, ‘ಭಾರತ ಜನಗಣತಿ 2027’ ಪ್ರಕ್ರಿಯೆಯು ಅತ್ಯಂತ ನಿಖರ ಮತ್ತು ವೈಜ್ಞಾನಿಕವಾಗಿ ನಡೆಯಬೇಕಿದೆ ಎಂದು ಹೇಳಿದರು.
ತರಬೇತಿ ಅಧಿಕಾರಿಗಳಾದ ವೈಭವ ಕೃಷ್ಣ, ಸೂರ್ಯನಾರಾಯಣ ಹಾಗೂ ಎಲ್.ಪಿ.ಅನುಜಾ ಅವರು ಜಣಗಣತಿ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಿದರು.
ಇದನ್ನೂ ಓದಿ: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ಮಾಸ್ಟರ್ ಟ್ರೈನರ್ ರಾಮಚಂದ್ರಪ್ಪ, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮ, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಮತ್ತಿತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
