
CHITRADURGA NEWS | 07 APRIL 2026
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿಯವರು ನಿರಂತರ 12 ವರ್ಷ ಅತ್ಯಂತ ಉತ್ತಮ ಆಡಳಿತ ನೀಡುತ್ತಿರುವ ಪರಿಣಾಮ ಭಾರತ ಪ್ರಪಂಚದಲ್ಲೇ ಬಲಿಷ್ಠ ರಾಷ್ಟ್ರವಾಗಿ ಬೆಳೆದುನಿಂತಿದೆ ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ಇದನ್ನೂ ಓದಿ: ಮರಗಳನ್ನು ಕಡಿದು ಕಟ್ಟಡ ಕಟ್ಟಲು ಬಿಡುವುದಿಲ್ಲ | MLC ಕೆ.ಎಸ್.ನವೀನ್ ಎಚ್ಚರಿಕೆ
ಭಾರತೀಯ ಜನತಾ ಪಾರ್ಟಿಯ 47ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇಸಿ ಮಾತನಾಡಿದ ಅವರು, ಪ್ರಸ್ತುತ ಅಮೇರಿಕಾ, ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಕಾರಣ ಜಗತ್ತಿನ ಅನೇಕ ದೇಶಗಳು ಅಲ್ಲೋಲ ಕಲ್ಲೋಲವಾಗಿವೆ. ಆದರೆ ಭಾರತದಲ್ಲಿ ಜನರಿಗೆ ಯಾವುದೇ ಹೊರೆಯಾಗದಂತೆ ಪ್ರಧಾನಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಂತರಾಷ್ಟ್ರಮಟ್ಟದಲ್ಲಿ ಭಾರತ ದೇಶ ಅತ್ಯಂತ ವೇಗವಾಗಿ ಬೆಳೆಯುವ ಮೂರನೇ ಆರ್ಥಿಕ ಶಕ್ತಿಯಾಗಿ ಭಾರತ ಬೆಳೆಯುತ್ತಿದೆ. ಇದು ಭಾರತೀಯರಾದ ನಾವೆಲ್ಲರೂ ಹೆಮ್ಮೆಪಡಬೇಕಾದ ವಿಚಾರ ಎಂದರು.
ಬಾಂಬೆಯಲ್ಲಿ ಬಿಜೆಪಿ ಪಕ್ಷದ ಪ್ರಥಮ ಸಮ್ಮೇಳನ ನಡೆದ ಸಂದರ್ಭದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಐತಿಹಾಸಿಕ ಭಾಷಣ ಮಾಡಿದ್ದರು. ಇಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಸೋತಿರಬಹುದು. ಆದರೆ ಒಂದಲ್ಲಾ ಒಂದು ದಿನ ಕಮಲ ಅರಳುತ್ತದೆ ಎಂದು ಪ್ರೋತ್ಸಾಹದ ಮಾತುಗಳನ್ನಾಡಿದ್ದರು. ಅಂದಿನಿಂದ ಇಂದಿನವರೆಗೆ 47 ವರ್ಷಗಳ ಕಾಲ ಸತತವಾಗಿ ಏಳುಬೀಳುಗಳ ನಡುವೆಯೂ ಬಿಜೆಪಿ ದೇಶದ ಮುಕ್ಕಾಲು ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
ಇಡೀ ದೇಶದಾದ್ಯಂತ ಬಿಜೆಪಿ ಮುಖಂಡರು, ಕಾರ್ಯಕರ್ತರ ಪ್ರತಿ ಮನೆ ಮನೆಯಲ್ಲಿ ಭಾರತೀಯ ಜನತಾ ಪಾರ್ಟಿ ಧ್ವಜವನ್ನು ಹಾರಿಸುವ ಮೂಲಕ ಸಂಸ್ಥಾಪನಾ ದಿನಾಚರಣೆ ಆಚರಿಸಲಾಗುತ್ತಿದೆ. ಅದರಂತೆ ಇಂದು ನಮ್ಮ ನಿವಾಸದಲ್ಲಿಯೂ ಸಹ ಧ್ವಜಾರೋಹಣ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನಾ ದಿನಾಚರಣೆ ಆಚರಿಸಲಾಗುತ್ತಿದೆ.
ಪಕ್ಷವು ಇನ್ನೂ ಹೆಚ್ಚಿನ ರೀತಿಯಲ್ಲಿ ಬೆಳೆೆಯಬೇಕು. ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಕ್ಷವನ್ನು ಬಲಗೊಳಿಸಬೇಕು ಎಂದು ಸಲಹೆ ಮಾಡಿದರು.
ಇದನ್ನೂ ಓದಿ: 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಡಾ.ಸಿದ್ದಾರ್ಥ್ ಗುಂಡಾರ್ಪಿ, ಶೈಲಜಾ ರೆಡ್ಡಿ, ಸಂಸ್ಥಾಪನಾ ದಿನಾಚರಣೆ ಸಂಚಾಲಕ ಮಾಧುರಿ ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಸಂಪತ್‌ಕುಮಾರ್, ಮೋಹನ್, ಜಿಲ್ಲಾ ಕಾರ್ಯದರ್ಶಿ ಕಾಲುವೇಹಳ್ಳಿ ಪಾಲಯ್ಯ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ನಗರಾಧ್ಯಕ್ಷ ಲೋಕೇಶ್, ಜಿ.ಪಂ. ಮಾಜಿ ಅಧ್ಯಕ್ಷೆ ಸಭಾಗ್ಯ ಬಸವರಾಜನ್, ಸಿದ್ದಾಪುರ ಸುರೇಶ್, ಶಿವಣ್ಣಾಚಾರ್, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಕಿರಣ್, ಎ.ರೇಖಾ, ಮಂಜುಳಮ್ಮ, ಬಸಮ್ಮ, ಲೀಲಾವತಿ, ವೀಣಾ ಮತ್ತಿತರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
