ಮುಖ್ಯ ಸುದ್ದಿ
ವಿಎಲ್‌ಟಿ, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ | ನಿರ್ಲಕ್ಷಿಸಿದರೆ ₹ 1000 ದಂಡ ಖಚಿತ
CHITRADURGA NEWS | 04 JULY 2024
ಚಿತ್ರದುರ್ಗ: ಸಾರ್ವಜನಿಕ ಸೇವೆಯ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಾಣಿಕೆ ವಾಹನಗಳಲ್ಲಿ ವಿಎಲ್‌ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಹಾಗೂ ಎಮರ್ಜನ್ಸಿ ಪ್ಯಾನಿಕ್ ಬಟನ್ ಅನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸಾರಿಗೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆದೇಶದಂತೆ ಸೆಪ್ಟೆಂಬರ್ 10ರವರೆಗೆ ಉಪಕರಣಗಳನ್ನು ಅಳವಡಿಸಕೊಳ್ಳಬೇಕಿದೆ. ಇದರೊಂದಿಗೆ ಆಂಬುಲನ್ಸ್‌ಗಳಲ್ಲಿ ಜಿಪಿಎಸ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ನ್ಯಾಯಾಲಯದ ಆದೇಶದಂತೆ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳಲ್ಲಿ ಅಂಗವಿಕಲರ ಪ್ರಯಾಣಕ್ಕೆ ಅನುಕೂವಾಗುವಂತೆ ಹತ್ತುವ ಮತ್ತು ಇಳಿಯುವ ವಿಶೇಷ ವ್ಯವಸ್ಥೆ ಹಾಗೂ ಅಂಧ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೈಕ್ ಮತ್ತು ಸ್ಪೀಕರ್ ಹೊಂದಿರುವ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಬಸ್ ನಿಲ್ದಾಣಗಳಲ್ಲಿ ಅಳವಡಿಸಬೇಕಿದೆ.
ಮಕ್ಕಳ ಹಿತದೃಷ್ಟಿಯಿಂದ ಬೈಕ್ ಸವಾರಿಯ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ 4 ವರ್ಷದ ಒಳಗಿನ ಮಕ್ಕಳಿಗೆ ಶಿಶು ಕವಚ ಕಡ್ಡಾಯಗೊಳಿಸಿದೆ. ಇಲ್ಲವಾದರೆ ರೂ.1000 ದಂಡ ವಿಧಿಸಲಾಗುವುದು. 2019 ಏಪ್ರಿಲ್ 1 ರ ಹಿಂದೆ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನೋಂದಣಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನಿಗದಿ ಪಡಿಸಿದ್ದ ಕಾಲಾವಕಾಶವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.