
CHITRADURGA NEWS | 20 SEPTEMBER 2025
ಹೊಳಲ್ಕೆರೆ: ಮಕ್ಕಳಿಗೆ ಆಸ್ತಿ ಮಾಡುವ ಬದಲು ವಿದ್ಯಾವಂತರನ್ನಾಗಿ ಮಾಡಿ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಮೃತ ವಿದ್ಯಾರ್ಥಿನಿ ವರ್ಷಿತಾ ತಾಯಿಗೆ ನೌಕರಿ | ಆದೇಶ ಪತ್ರ ವಿತರಿಸಿದ ಸಚಿವ ಡಿ.ಸುಧಾಕರ್
ತಾಲ್ಲೂಕಿನ ನಗರಘಟ್ಟ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಚುನಾವಣೆಯಲ್ಲಿ ಗೆಲ್ಲುವತನಕ ನಾನು ಒಂದು ಪಕ್ಷದವನು. ಗೆದ್ದ ಮೇಲೆ ಎಲ್ಲರಿಗೂ ನಾನು ಎಂ.ಎಲ್.ಎ. ಯಾವ ತಾರತಮ್ಯ ಮಾಡುವುದಿಲ್ಲ ಎಂದರು.
ಶಾಲೆ ಮೇಲೆ ಬೇವು-ಜಾಲಿ ಗಿಡಗಳು ಬೆಳೆದಿತ್ತು. ಕೆಡವಿ 46 ರೂಂಗಳನ್ನು ಕಟ್ಟಿಸಿದ ಪರಿಣಾಮವಾಗಿ 1650 ಬಡ ಮಕ್ಕಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕರಿಯಮ್ಮ ದೇವಸ್ಥಾನಕ್ಕೆ ಕಾಂಕ್ರಿಟ್ ರಸ್ತೆ ಮಾಡಿಸುತ್ತೇನೆ ಎಂದು ತಿಳಿಸಿದರು.
ಇನ್ನು ಮೂರು ತಿಂಗಳೊಳಗೆ ತಾಲ್ಲೂಕಿನ ಎಲ್ಲಾ ಕೆರೆಕಟ್ಟೆಗಳಿಗೆ ಭದ್ರಾ ಯೋಜನೆಯಿಂದ ನೀರು ತುಂಬಿಸುತ್ತೇನೆ. ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದ್ದೇನೆ. ಹದಿನೈದು ದಿನದೊಳಗೆ ಸರ್ಕಾರಿ ಶಾಲೆಗೆ ಇನ್ನು ಎರಡು ಬಸ್‍ಗಳನ್ನು ಬಿಟ್ಟು. ಎರಡು ಶಾಲೆಗಳನ್ನು ಮಂಜೂರು ಮಾಡುತ್ತೇನೆಂದು ಭರವಸೆ ನೀಡಿದರು.
ಇದನ್ನೂ ಓದಿ: ವರ್ಷಿತಾ ಕೊಲೆ | ಸುಮೋಟೊ ಕೇಸ್ ದಾಖಲಿಸಿಕೊಂಡ ಎಸ್ಸಿ ಕಮಿಷನ್
ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಯ್ಯ, ಮಾಜಿ ಅಧ್ಯಕ್ಷ ಪ್ರವೀಣ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರಪ್ಪ, ಎಂ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಅಂಕಳಪ್ಪ
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶೇಖರಪ್ಪ, ಕರಿಯಪ್ಪ, ನಾಗರಾಜಪ್ಪ, ಶ್ರೀನಿವಾಸ್, ಸಿದ್ದಪ್ಪ ಹಾಗೂ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
