CHITRADURGA NEWS | 21 FEBRUARY 2025
ಚಿತ್ರದುರ್ಗ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯಿಂದ ಮುರುಘಾಮಠದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಐತಿಹಾಸಿಕ ಸ್ಥಳಗಳ ಪರಿಚಯ ಮತ್ತು ವೀಕ್ಷಣಾ ಶಿಬಿರವನ್ನು ಗುಲ್ಬರ್ಗದ ಸಿದ್ದಬಸವ ಸ್ವಾಮೀಜಿ ಉದ್ಘಾಟಿಸಿದರು.
Also Read: ನಂದಿ ರಥಯಾತ್ರೆ | ಹಸು ಇದ್ದ ಮನೆಗೆ ವಾಸ್ತು ಬೇಕಾಗಿಲ್ಲ | ಕುಮಾರಸ್ವಾಮಿ
ನಂತರ ಮಾತನಾಡಿದ ಸಿದ್ದಬಸವ ಸ್ವಾಮೀಜಿ, ಮಕ್ಕಳಲ್ಲಿ ದೇಶಾಭಿಮಾನ, ದೇಶಭಕ್ತಿ ಬೆಳೆಸಬೇಕು ಎಂದು ಕರೆ ನೀಡಿದರು.
ವೀರವನಿತೆ ಒನಕೆ ಓಬವ್ವ ಪ್ರಾಣವನ್ನು ಲೆಕ್ಕಿಸದೆ ಒನಕೆಯಿಂದ ಶತ್ರುಗಳನ್ನು ಸದೆ ಬಡಿದು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿದಳು. ಶತೃಗಳನ್ನು ಸಂಹಾರ ಮಾಡಿದ ಬಿಚ್ಚುಗತ್ತಿ ಭರಮಣ್ಣನಾಯಕನ ಛಲ, ಶೌರ್ಯ ಇಂದಿನ ಮಕ್ಕಳಲ್ಲಿ ಮೂಡಬೇಕು ಎಂದರು.
ರಾಜಮಹಾರಾಜರು, ಪಾಳೆಯಗಾರರು ಆಳಿದ ಚಿತ್ರದುರ್ಗಕ್ಕೆ ತನ್ನದೆ ಆದ ಇತಿಹಾಸವಿದೆ. ಶೌರ್ಯ ಪರಾಕ್ರಮಕ್ಕೆ ಹೆಸರುವಾಸಿಯಾದುದು. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿರುವ ನೀವುಗಳು ಇಲ್ಲಿನ ಇತಿಹಾಸ ತಿಳಿದುಕೊಳ್ಳಬೇಕೆಂದು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ತಿಳಿಸಿದರು.
Also Read: ಎಚ್.ಡಿ.ಪುರ | ಮಾರ್ಚ್ 13 ರಂದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮುಖ್ಯ ಆಯುಕ್ತ ಕೆ.ರವಿಶಂಕರ್‌ರೆಡ್ಡಿ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ದೇಶ ಕಟ್ಟುವ ನಾಯಕತ್ವ ಬೆಳೆಯುತ್ತದೆ ಎಂದರು.
ಭಾರತದ ಭವ್ಯ ಭವಿಷ್ಯ ಯುವ ಜನಾಂಗದ ಮೇಲೆ ನಿಂತಿದೆ. ಶಿಕ್ಷಣದ ಜೊತೆ ಇಂತಹ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವುದರಿಂದ ಬದುಕುವ ಕೌಶಲ್ಯ ಕಲಿಯಬಹುದು. ಇಂದಿನ ಮಕ್ಕಳಲ್ಲಿ ಮೌಲ್ಯ, ಸಿದ್ದಾಂತಗಳು ಮಾಯವಾಗುತ್ತಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣ, ಮೊಬೈಲ್ ಗೀಳಿನಿಂ ಯುವ ಪೀಳಿಗೆ ಹೊರ ಬರಬೇಕಿದೆ. ಮೊಬೈಲನ್ನು ಒಳ್ಳೆಯದಕ್ಕಷ್ಟೆ ಬಳಸಿಕೊಳ್ಳಬೇಕು. ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರ ಕಲಿಯಬೇಕು. ವಯಸ್ಸಾದ ತಂದೆ-ತಾಯಿಗಳನ್ನು ವೃದ್ದಾಶ್ರಮಕ್ಕೆ ಸೇರಿಸುವ ಪದ್ದತಿ ಒಳ್ಳಯದಲ್ಲ. ಬದುಕಿಗೆ ಸ್ಪಷ್ಟ ಗುರಿ ಇದ್ದಾಗ ಮಾತ್ರ ಗುರಿ ಸಾಧನೆ ಮಾಡಲು ಸಾಧ್ಯ ಎಂದರು.
ಗುರುಮಠಕಲ್ ಮಠದ ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಚಿತ್ರದುರ್ಗ ಮುರುಘಾಮಠಕ್ಕೆ ಮೂರು ಶತಮಾನಗಳ, ರಾಜ ಪರಂಪರೆಯ ಇತಿಹಾಸವಿದೆ. ಚಿತ್ರದುರ್ಗ ಕೋಟೆಗೆ ಘನ ಪರಂಪರೆಯಿದೆ. ಇದನ್ನೆಲ್ಲಾ ಇಂದಿನ ಮಕ್ಕಳು ಅಧ್ಯಯನ, ಪ್ರವಾಸದ ಮೂಲಕ ತಿಳಿಯಬೇಕು ಎಂದರು.
Also Read: APMCಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಜಿ.ಎಸ್.ಉಜ್ಜಿನಪ್ಪ ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ, ಜಿಲ್ಲಾ ಸ್ಥಾನಿಕ ಆಯುಕ್ತರಾದ ಎಂ.ಕೆ.ಅನಂರೆಡ್ಡಿ, ಪಿ.ವೈ.ದೇವರಾಜಪ್ರಸಾದ್, ರೋವರ್ಸ್ ಶಿಬಿರದ ನಾಯಕ ಟಿ.ಎಸ್.ಶಿವಣ್ಣ, ರೇಂಜರ್ಸ್ ಶಿಬಿರದ ನಾಯಕಿ ಅಶ್ವಿನಿ ಆರ್.ಎಲ್. ರೇಂಜರ್ಸ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಕೆ.ಲೀಲಾವತಿ, ರೋವರ್ಸ್ ಜಿಲ್ಲಾ ನೋಡಲ್ ಅಧಿಕಾರಿ ಹೆಚ್.ತಿಪ್ಪೇಸ್ವಾಮಿ ವೇದಿಕೆಯಲ್ಲಿದ್ದರು.