
CHITRADURGA NEWS | 05 JULY 2026
ಚಿತ್ರದುರ್ಗ: ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕಲುಷಿತ ನೀರು ಸರಬರಾಜಾಗದಂತೆ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ | ಡಾ.ಜಿ.ಪರಮೇಶ್ವರ್
ಮಳೆಗಾಲದಲ್ಲಿ ಪೈಪ್‌ಲೈನ್‌ಗಳ ಮೂಲಕ ನೀರು ಸರಬರಾಜು ಮಾಡುವಾಗ ವಿಶೇಷ ಎಚ್ಚರಿಕೆ ಅಗತ್ಯ. ಕೆಲವು ಕಡೆಗಳಲ್ಲಿ ಪೈಪ್‌ಗಳನ್ನು ಸರಿಯಾಗಿ ಜೋಡಿಸದೇ ಇರುವುದರಿಂದ ನೀರು ನಿಂತು ಪಾಚಿ ಕಟ್ಟಿಕೊಳ್ಳುತ್ತದೆ.
ನೀರು ಸರಬರಾಜು ಸ್ಥಗಿತಗೊಂಡು, ಬಳಿಕ ಮತ್ತೆ ಮೋಟಾರ್ ಆನ್ ಮಾಡಿದಾಗ ಸುತ್ತಮುತ್ತಲಿನ ಕಲುಷಿತ ನೀರು ಪೈಪ್‌ಲೈನ್‌ಗೆ ಮರುಸಂಗ್ರಹಣೆ (ಸಕ್ಷನ್) ಆಗುವ ಅಪಾಯ ಇರುತ್ತದೆ. ಇದರಿಂದಾಗಿ ಕಲುಷಿತ ನೀರು ಸಾರ್ವಜನಿಕರಿಗೆ ಸರಬರಾಜಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು.
ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯ ಹದಗೆಡುತ್ತದೆ. ಈ ಹಿಂದೆ ಕಲುಷಿತ ನೀರು ಕುಡಿದು ಕೆಲವರು ಮೃತಪಟ್ಟ ಉದಾಹರಣೆಗಳೂ ಇವೆ. ಇಂತಹ ಘಟನೆಗಳು ಮರುಕಳಿಸದಂತೆ ವಾಟರ್ ಸರಬರಾಜು ಇಂಜಿನಿಯರ್‌ಗಳು, ಜೂನಿಯರ್ ಹಾಗೂ ಅಸಿಸ್ಟೆಂಟ್ ಇಂಜಿನಿಯರ್‌ಗಳು ತಳಮಟ್ಟದಲ್ಲಿ ಪರಿಶೀಲನೆ ನಡೆಸಬೇಕು.
ಇದನ್ನೂ ಓದಿ: DCC ಬ್ಯಾಂಕ್ | ಬೆಳೆಸಾಲ ಮನ್ನಾ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಮನವಿ
ಇಡೀ ಜಿಲ್ಲೆಯಲ್ಲಿ ಇಂತಹ ಯಾವುದೇ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಇದರಲ್ಲಿ ಯಾವುದೇ ಲೋಪ ಕಂಡುಬAದು ಅನಾಹುತಗಳಾದರೆ ನೇರವಾಗಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಎಚ್ಚರಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

