Connect with us

    ಶುದ್ದ ನೀರು ಕೊಡಲು ಮೊದಲು RO ಘಟಕ ರಿಪೇರಿ ಮಾಡಿಸಲು ಅಧಿಕಾರಿಗಳಿಗೆ ಸೂಚನೆ

    ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

    ಮುಖ್ಯ ಸುದ್ದಿ

    ಶುದ್ದ ನೀರು ಕೊಡಲು ಮೊದಲು RO ಘಟಕ ರಿಪೇರಿ ಮಾಡಿಸಲು ಅಧಿಕಾರಿಗಳಿಗೆ ಸೂಚನೆ

    CHITRADURGA NEWS | 26 JUNE 2024

    ಚಿತ್ರದುರ್ಗ: ಎಲ್ಲ ಕಡೆಯಿಂದಲೂ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಡಿಕೆ ಇದೆ. ಹಾಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲಿದ್ದು, ಕಾರ್ಯಾರಂಭ ಮಾಡಬೇಕು. ಗ್ರಾಮೀಣ ಕುಡಿಯುವ ನೀರಿನ ಅಧಿಕಾರಿಗಳು ಹಾಗೂ ತಾ.ಪಂ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಸಣ್ಣಪುಟ್ಟ ದುರಸ್ಥಿಯಿದ್ದಲ್ಲಿ ಪಂಚಾಯಿತಿ ಮಟ್ಟದಲ್ಲಿಯೇ ಆರ್.ಓ.ಘಟಕ ರಿಪೇರಿ ಮಾಡಿಸುವಂತೆ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇದನ್ನೂ ಓದಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಈ ವರ್ಷ ಟಾಪ್‌ಟೆನ್ ಪಕ್ಕಾ | ಡಿಡಿಪಿಐ ಭರವಸೆ

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ.

    ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಗ್ರಾಮೀಣಾ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅವರಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿರುವ ಆರ್.ಓ.ಘಟಕಗಳ ನಿರ್ವಹಣೆಗೆ ಒಂದೇ ಏಜೆನ್ಸಿ ನಿರ್ವಹಣೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಸಭೆಗೆ ಮಾಹಿತಿ ನೀಡಿದರು.

    ಇದನ್ನೂ ಓದಿ: ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣಕ್ಕೆ ತೀರ್ಮಾನ | ಸಚಿವ ಡಿ.ಸುಧಾಕರ್ ಸೂಚನೆ | ಎಲ್ಲ ಶಾಸಕರ ಸಹಮತ

    ವಿದುಯುತ್ ಬಿಲ್ ಪಾವತಿಸಿರುವ, ಸುಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಂಬಂಧಪಟ್ಟ ಏಜೆನ್ಸಿಯವರು ಗ್ರಾಮ ಪಂಚಾಯಿತಿಯವರಿಗೆ ಹಸ್ತಾಂತರ ಮಾಡಿದರೆ ಇಂತಹ ಆರ್.ಓ. ಘಟಕಗಳನ್ನು ಪಂಚಾಯಿತಿ ವತಿಯಿಂದಲೇ ನಿರ್ವಹಣೆ ಮಾಡಲು ಕ್ರಮವಹಿಸಲಾಗುವುದು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top