
CHITRADURGA NEWS | 19 NOVEMBER 2025
ಚಿತ್ರದುರ್ಗ: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಹಾಗೂ ರೈಲ್ವೇ ನಿಲ್ದಾಣದಲ್ಲಿ ವಾಸವಿರುವ ಬೀದಿ ನಾಯಿಗಳನ್ನು ಪರಿಶೀಲಿಸಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ನಗರ ಸಭೆ ಮುಖ್ಯಾಧಿಕಾರಿಗಳು ಅಥವಾ ಪೌರಾಯುಕ್ತರಿಗೆ ಮಾಹಿತಿ ನೀಡಬೇಕು.
ಇದನ್ನೂ ಓದಿ: ಜೆಡಿಎಸ್ ಪಕ್ಷಕ್ಕೆ 25 ವರ್ಷ | ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ | ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ
ಈ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆ ವತಿಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಜವಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು.
ಸ್ಥಳಾಂತರದ ನಂತರ ಪುನಃ ನಾಯಿಗಳು ವಾಸ ಮಾಡಲು ಅವಕಾಶ ನೀಡಬಾರದು. ಒಂದು ವೇಳೆ ಬೀದಿ ನಾಯಿಗಳು ವಾಸವಾಗಿರುವುದು ಕಂಡುಬಂದರೆ ಸಂಬಂದ ಪಟ್ಟ ಸಂಸ್ಥೆಯಿಂದ ಸ್ಥಳಾಂತರದ ವೆಚ್ಚವನ್ನು ವಸೂಲಿ ಮಾಡಿ, ನ್ಯಾಯಾಲಯದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಳಲ್ಕೆರೆ ಪುರಸಭಾ ಹಾಗೂ ಚಳ್ಳಕೆರೆ ನಗರಸಭೆ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

