CHITRADURGA NEWS | 07 SEPTEMBER 2026
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜಂಟಿಯಾಗಿ ಆಯೋಜಿಸಿರುವ 2026-27ನೇ ಸಾಲಿನ ‘ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಬಾಸ್ಕೆಟ್ಬಾಲ್ ಪಂದ್ಯಾವಳಿ ಮತ್ತು ಆಯ್ಕೆ ಪ್ರಕ್ರಿಯೆ’ ನಗರದ ಡಾನ್ ಬಾಸ್ಕೊ ಪಿಯು ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 8 ಮತ್ತು 9ರಂದು ನಡೆಯಲಿದೆ.
ಇದನ್ನೂ ಓದಿ: ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಸೆಪ್ಟೆಂಬರ್ 8ರಂದು ಬೆಳಿಗ್ಗೆ 10ಕ್ಕೆ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಸಿ. ವೀರೇಂದ್ರ (ಪಪ್ಪಿ) ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಶಿವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣೆಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹಾಗೂ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ತಿಪ್ಪೇಸ್ವಾಮಿ ಎಚ್., ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಡೀನ್ ಡಾ. ವೆಂಕಟೇಶ್ ಕೆ., ಡಾನ್ ಬಾಸ್ಕೊ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಫಾದರ್ ಆಗಸ್ಟಿ ಬಿ.ಎ., ಹಾಗೂ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಸಾಧಿಕ್ ಎಮ್.ಜೆ. ಭಾಗವಹಿಸಲಿದ್ದಾರೆ.
ಸರ್ಕಾರಿ ಕಲಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಸನ್ನಕುಮಾರ್ ಡಿ.ಆರ್., ಸ.ಪ್ರ.ದ.ಮ.ಕಾ. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಜಯಲಕ್ಷ್ಮಮ್ಮ ಕೆ., ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಡಾ. ಮಧುಸೂದನ ಪಿ.ಎನ್., ಐ.ಕ್ಯೂ.ಎ.ಸಿ. ಸಂಚಾಲಕ ಹಲಸಂದಿ ಸತೀಶ್ ಹಾಗೂ ಪತ್ರಾಂಕಿತ ವ್ಯವಸ್ಥಾಪಕ ವೇಂಕಟೇಶ್ ಉಪಸ್ಥಿತರಿರಲಿದ್ದಾರೆ ಎಂದು ದೈಹಿಕ ಶಿಕ್ಷಣ ನಿರ್ದೇಶಕ ಶಿವಪ್ರಸಾದ್ ಆರ್. ಹಾಗೂ ಪ್ರಾಂಶುಪಾಲ ಡಾ. ಶಿವಣ್ಣ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಈ ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

