
CHITRADURGA NEWS | 27 FEBRUARY 2026
ಚಿತ್ರದುರ್ಗ: ದಾವಣಗೆರೆಯ ವಿ.ಟಿ.ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಪ್ಲಾಟಿನಮ್ ಜುಬಿಲಿ ಸೆಲೆಬ್ರೇಶನ್ ಉತ್ಕರ್ಷ-2026 ಅಂಗವಾಗಿ ನಡೆದ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಿತ್ರದುರ್ಗದ ಎಸ್.ಜೆ.ಎಂ. ಫಾರ್ಮಸಿ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಹತ್ತು ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ಪಡೆಯಿತು.
ರೋಹಿತ್ ಕುಮಾರ್ (ತಂಡದ ನಾಯಕ), ಮಣಿ ಯಾದವ್, ರಾಹುಲ್ ನಂದನ್, ಅರುಣ್ ಕುಮಾರ್, ಸರೋಜ್ ಮಂಡಲ್, ರಥಿನ್ ಮೈಟಿ, ಅಭಿಜಿತ್ ಸಮಯ್, ಅರಿಂದಮ್ ವಿಶ್ವಾಸ್, ದರ್ಶನ್ ಲಮಾಣಿ, ತರುಣ್ ಕುಮಾರ್, ಶರಣ್ ರಾಥೋಡ್ ಬಿ ಫಾರ್ಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಇದನ್ನೂ ಓದಿ: ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದರು.
ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನವನ್ನು ನೀಡಿ ಆಯೋಜಕರ ಪ್ರಶಂಸೆಗೆ ಪಾತ್ರರಾಗಿದ್ದು, ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ್, ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿ, ಪ್ರಾಂಶುಪಾಲರಾದ ಡಾ.ಟಿ.ಎಸ್.ನಾಗರಾಜ್ ಅವರುಗಳು ಅಭಿನಂದನೆ ಸಲ್ಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
