
CHITRADURGA NEWS | 02 AUGUST 2024
ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳ ಅಭಿವೃದ್ಧಿಗೆ ಸುಪ್ರೀಂ ಕೋರ್ಟ್‌ನ ಉಪ ವರ್ಗೀಕರಣ ದಿಕ್ಸೂಚಿಯಾಗಲಿದೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಸೂಚಿಸಿರುವ ಮಾರ್ಗವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮವಾಗಿ ಪರಿಗಣಿಸುವ ನಿರ್ಧಾರವಾಗಬೇಕಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ನ್ಯಾಯಪೀಠ 6:1 ಬಹುಮತದೊಂದಿಗೆ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎಸ್‌ಸಿ, ಎಸ್‌ಟಿ ವರ್ಗದಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಎಂದು ಪೀಠ ಹೇಳಿದೆ. ನ್ಯಾಯಮೂರ್ತಿ ಬೇಲ್ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಒಳಮೀಸಲಾತಿ ಹೋರಾಟಕ್ಕೆ ದಿಗ್ವಿಜಯ | ಮಾಜಿ ಸಚಿವ ಎಚ್.ಆಂಜನೇಯ
ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯ್ದೆ 2006 ರ ಸೆಕ್ಷನ್ 4(5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತ್ತು, ಹೈಕೋರ್ಟ್ 2010 ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ತೀರ್ಪು ನೀಡಿದೆ. ಈ ಮೂಲಕ ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳಲ್ಲಿ ಉಪ ವರ್ಗೀಕರಣಕ್ಕೆ ರಾಜ್ಯಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
ವಿಶೇಷವಾಗಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಜಾತಿವಾರು ಒಳಮೀಸಲಾತಿಯಾಗಿರದೆ ಹೆಚ್ಚು ತಾರತಮ್ಯವನ್ನು ಅನುಭವಿಸುತ್ತಿರುವವರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಲು ಸರ್ಕಾರಗಳು ಉಪವರ್ಗೀಕರಣ ಮಾಡಬಹುದಾಗಿರುತ್ತದೆ. ಉಪ ವರ್ಗೀಕರಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದೊಳಗಿನ ತಾರತಮ್ಯ ಮಟ್ಟವನ್ನು ಆಧರಿಸಿ ಕಡುಬಡ ಕುಟುಂಬಗಳ ಅಭಿವೃದ್ಧಿಗೆ ಉಪ ವರ್ಗೀಕರಣದ ಮೂಲಕ ಅವಕಾಶಗಳನ್ನು ರಾಜ್ಯ ಸರ್ಕಾರ ನೀಡುವ ಮೂಲಕ ಮೀಸಲಾತಿಯ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕಾಗಿದೆ ಎಂದು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
