
CHITRADURGA NEWS | 01 OCTOBER 2024
ಚಿತ್ರದುರ್ಗ: ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಅ.3 ರಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದಿಂದ ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಹಿರಿಯೂರು ನಗರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದ ಕಾರ್ಯದರ್ಶಿ ಕೆ. ರಾಮಚಂದ್ರ, ರಾಜ್ಯ ಸರ್ಕಾರ ಯಾವುದೇ ನೆಪ ಹೇಳದೇ ಸುಪ್ರೀಂ ಕೋರ್ಟ್ ಆದೇಶದಂತೆ ಒಳಮೀಸಲಾತಿ ಅನುಷ್ಠಾನಕ್ಕೆ ತರಬೇಕು. ಜಿಲ್ಲೆಯಲ್ಲಿನ ದಲಿತ ಸಂಘಟನೆಗಳು ಪ್ರತಿ ಊರು–ಕೇರಿಗಳಲ್ಲಿ ನೆಲೆಸಿರುವ ಮಾದಿಗ ಸಮುದಾಯದವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿವೆ. ಪಾದಯಾತ್ರೆಗೆ ಪ್ರತಿ ತಾಲ್ಲೂಕಿನಿಂದ ಸಮುದಾಯದ ಸಾವಿರಾರು ಜನರು ಆಗಮಿಸಲಿದ್ದಾರೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | 01 ಅಕ್ಟೋಬರ್ | ಆರ್ಥಿಕ ಪ್ರಗತಿ , ಸಕಾಲದಲ್ಲಿ ಕೆಲಸಗಳು ಪೂರ್ಣ, ಶುಭ ಕಾರ್ಯ

ಸುಪ್ರೀಂ ಆದೇಶ ಬಂದು ತಿಂಗಳು ಕಳೆದರೂ ರಾಜ್ಯ ಸರ್ಕಾರ ಈ ಬಗ್ಗೆ ಮೌನವಾಗಿದೆ. ಹೀಗಾಗಿ ಸರ್ಕಾರವನ್ನು ಎಚ್ಚರಿಸಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಗೌರವಾಧ್ಯಕ್ಷ ಮೊಹಮ್ಮದ್ ಮೊಹಿಸಿನ್, ಉಪಾಧ್ಯಕ್ಷ ಸಯ್ಯದ್ ಮುಜಾಯಿದ್, ತಾಲ್ಲೂಕು ಘಟಕದ ಅಧ್ಯಕ್ಷ ಆರ್. ರಾಘವೇಂದ್ರ, ಗೋವಿಂದಪ್ಪ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
