
CHITRADURGA NEWS | 13 AUGUST 2025
ಚಿತ್ರದುರ್ಗ: ಒಳ ಮೀಸಲಾತಿ ಜಾರಿಗೊಳಿಸಲು ಮಿನಾಮೇಷ ಎಣಿಸುತ್ತಿರುವ ಸರ್ಕಾರ ತನ್ನ ನಿಲುವು ಬದಲಿಸಿ ನ್ಯಾ. ನಾಗಮೋಹನ್ ದಾಸ್ ವರದಿಯನ್ವಯ ಶೀಘ್ರವೇ ಒಳ ಮೀಸಲಾತಿ ಜಾರಿಗೆ ತರುವಂತೆ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಗ್ರಹಿಸಿತು.
ಇದನ್ನೂ ಓದಿ: ಆ.21 ರಂದು ಅಣಬೆ ಬೇಸಾಯ ತರಬೇತಿ
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ಮಾದಿಗ ಸಮುದಾಯ ನಡೆಸುತ್ತಿರುವ ಹೋರಾಟ ಹಾಗೂ ಒಳ ಮೀಸಲು ನೀಡದೆ ಇರುವುದರಿಂದ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯದ ಕುರಿತು ವಿವರಿಸಿದ ಶ್ರೀಗಳು ಯಾವುದೇ ಒತ್ತಡಕ್ಕೆ ಮಣಿಯದೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಸ್ವಾಮೀಜಿಯವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರ ಸಾಮಾಜಿಕ ನ್ಯಾಯದ ಪರವಿದೆ. ಹೀಗಾಗಿ ಒಳ ಮೀಸಲಾತಿ ಜಾರಿ ಮಾಡುವುದು ಶತಸಿದ್ದ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಶರಣಸಂಸ್ಕೃತಿ ಉತ್ಸವ | ಆಗಸ್ಟ್ 17 ರಂದು ಪೂರ್ವಸಿದ್ಧತಾ ಸಭೆ
ನಿಯೋಗದಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ರಾಜ್ಯಸಭೆ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ, ಮಾದಿಗ ಸಮುದಾಯದ ಮುಖಂಡರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
