ಮುಖ್ಯ ಸುದ್ದಿ
Supreem Court: ಮೀಸಲಾತಿ ಒಪ್ಪುವವರು ಒಳಮೀಸಲಾತಿ ವಿರೋಧಿಸಬಾರದು | ಜೆ.ಯಾದವರೆಡ್ಡಿ

CHITRADURGA NEWS | 24 NOVEMBER 2024
ಚಿತ್ರದುರ್ಗ: ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದಾಶಿವ ಆಯೋಗದ ವರದಿಯ ಆಧಾರದ ಮೇಲೆಯೆ ಒಳಮೀಸಲಾತಿ ಜಾರಿ ಮಾಡಬಹುದು. 1901 ರಿಂದ ಈವರೆಗೆ ನೀಡಿರುವ ವಿವಿಧ ಆಯೋಗದ ವರದಿಯಗಳು (Supreem Court)ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ ದೊಡ್ಡವಲ್ಲ ಎಂದು ಚಿಂತಕ ಜೆ.ಯಾದವರೆಡ್ಡಿ ಅಭಿಪ್ರಾಯಪಟ್ಟರು.
ಮಾದಿಗ ಮಹಾಸಭಾ, ಲಂಕೇಶ್ ವಿಚಾರ ವೇದಿಕೆ, ಬೀಕೆ-ಕೇಬಿ ಬಳಗದ ಸಹಯೋಗದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಆಯೋಗ ಸಾಧ್ಯತೆ-ಸವಾಲುಗಳು ಕುರಿತು ಕ್ರೀಡಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾಯನಾಡಿದರು.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು | ಸಿದ್ದರಾಮಯ್ಯರ ಜನಪರ ಆಡಳಿತಕ್ಕೆ ಜನ ಬೆಂಬಲ | ಎಚ್.ಆಂಜನೇಯ
ಮಿಲ್ಲರ್ ಆಯೋಗ, ಎಲ್.ಜಿ.ಹಾವನೂರ್ ಆಯೋಗದ ವರದಿಯನ್ನು ಕೆಲವರು ವಿರೋಧಿಸಿದ್ದುಂಟು. ಡಿ.ವಿ.ಗುಂಡಪ್ಪನವರಿಂದ ಹಿಡಿದು ಅನೇಕ ಸಾಹಿತಿಗಳು ಮೀಸಲಾತಿ ವಿರುದ್ದವಾಗಿ ಮಾತನಾಡಿದ್ದರು. ಶೇ.73 ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಮಹರಾಜರು ನೀಡಿದ್ದರು. ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವಿರುದ್ದವು ಅಪಸ್ವರಗಳು ಕೇಳಿ ಬರುತ್ತಿವೆ ಎಂದರು.
ಒಳ ಮೀಸಲಾತಿ ಬಗ್ಗೆ ದಲಿತ ಸಮುದಾಯಗಳೇ ಅತ್ಯುಗ್ರವಾಗಿ ಮಾತನಾಡುತ್ತಿರುವುದು ನೋವಿನ ಸಂಗತಿ. ಯಾರು ಯಾರ ಮೀಸಲಾತಿಯನ್ನು ಕಸಿಯುವುದಿಲ್ಲ. ಆಯಾ ಜಾತಿಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು. ಇಲ್ಲದಿದ್ದರೆ ಮುಂದೆ ಸ್ವಾಸ್ಥ್ಯ ಸಮಾಜವಿರುವುದಿಲ್ಲ. ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದರು.
ಇದನ್ನೂ ಓದಿ: ಚಿತ್ರದುರ್ಗದಿಂದ ಶಿವಣ್ಣನ ರಣಗಲ್ ಯಾತ್ರೆ | ಮುಂದಿನ ಸಿನಿಮಾ ಸುಳಿವು ನೀಡಿದ ಹ್ಯಾಟ್ರಿಕ್ ಹೀರೋ
ಮೀಸಲಾತಿಯನ್ನು ಒಪ್ಪಿಕೊಳ್ಳುವವರು ಒಳಮೀಸಲಾತಿಗೆ ವಿರೋಧಿಸಿದರೆ ಸಂವಿಧಾನಶಿಲ್ಪಿ ಡಾ.ಬಿ.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಳ ಮೀಸಲಾತಿಯನ್ನು ಇμÉ್ಟೂತ್ತಿಗಾಗಲೆ ಜಾರಿಗೊಳಿಸಬೇಕಿತ್ತು. ನ್ಯಾ. ನಾಗಮೋಹನ್‍ದಾಸ್ ವರದಿಯ ಅವಶ್ಯಕತೆಯಿಲ್ಲ.
ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ್ದರೂ ದತ್ತಾಂಶದ ನೆಪ ಹೇಳುತ್ತಿರುವುದು ರಾಜಕೀಯ ನಾಟಕ ಎಂದು ಆಪಾದಿಸಿದರು.
ಇದನ್ನೂ ಓದಿ: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ
ಸಾಮಾಜಿಕ, ರಾಜಕೀಯ ವಿಶ್ಲೇಷಕ ಕೋಡಿಹಳ್ಳಿ ಸಂತೋಶ್ ಮಾತನಾಡಿ, ಸುಪ್ರೀಂಕೋರ್ಟ್ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿ ಮೂರು ತಿಂಗಳು ಕಳೆದಿದ್ದರು ರಾಜ್ಯ ಸರ್ಕಾರ ದತ್ತಾಂಶ ಮುಂದಿಟ್ಟುಕೊಂಡು ಒಳ ಮೀಸಲಾತಿಯನ್ನು ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ.
ಕಳೆದ ಮೂರ್ನಾಲ್ಕು ದಶಕಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಮಾದಿಗ ಸಮುದಾಯ ಒಂಟಿಯಲ್ಲ.
ಸಂಘಟನೆ ಮಾಡಿಕೊಂಡು ಹೋರಾಡುತ್ತೇವೆ. ಒಳ ಮೀಸಲಾತಿ ಅನುμÁ್ಠನಗೊಳಿಸಲು ಇಷ್ಟವಿಲ್ಲದಿದ್ದರೆ ಮತ್ತೆ ಕೋರ್ಟಿಗೆ ಹೋಗುತ್ತೇವೆನ್ನುವುದಾದರೆ ಹೋಗಿ ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.
ಇದನ್ನೂ ಓದಿ: ಚಿತ್ರದುರ್ಗ CYBER ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಗಾಂಜಾ ಪೆಡ್ಲರ್ ಬಂಧನ
ತುಮಕೂರು ವಿಶ್ವವಿದ್ಯಾನಿಲಯದ ಲೇಖಕ ಪ್ರಾಧ್ಯಾಪಕ ಡಾ.ನಾಗಭೂಷಣ ಬಗ್ಗನಡು ಮಾತನಾಡಿ, ಇಡೀ ದೇಶದಲ್ಲಿ ಕಳೆದ ನಲವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಪ್ರತಿಭಟನೆ ಚಳುವಳಿಗಳು ನಡೆಯುತ್ತಲಿವೆ. ಕೊಟ್ಟ ಮೀಸಲಾತಿಯನ್ನು ಹಂಚಿ ತಿನ್ನಲು ಒಳ ಮೀಸಲಾತಿ ನೀಡುವುದಕ್ಕೆ ಅರ್ಧ ಶತಮಾನವಾಗಿದೆ. ಇದಕ್ಕಾಗಿ ಹೋರಾಟ ನಡೆಸಿದ ಅನೇಕರು ನಮ್ಮನ್ನೆಲ್ಲಾ ಅಗಲಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಜಾಣೆ ನಡೆ ಪ್ರದರ್ಶಿಸುತ್ತಿದೆ. 75 ವರ್ಷಗಳ ಕಾಲ ಮೀಸಲಾತಿ ಉಂಡವರು ಒಳ ಮೀಸಲಾತಿ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಚಿಂತನೆಯನ್ನಿಟ್ಟುಕೊಂಡು ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ರವರ ಚಿಂತನೆಗಳನ್ನು ಹೊತ್ತವರು ಅವರ ಆಶಯಗಳನ್ನು ಏಕೆ ಮರೆತಿದ್ದಾರೆನ್ನುವುದೆ ಯಕ್ಷ ಪ್ರಶ್ನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹೊಸ ಬಂಡಿಗಳ ಆಗಮನ | ಹಬ್ಬಿದಾ ಮಲೆ ಮಧ್ಯದೊಳಗೆ
ಚಿಂತಕ ಶಿವಸುಂದರ್, ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ, ಹಿರಿಯ ಹೋರಾಟಗಾರ ಬಿ.ಪಿ.ಪ್ರಕಾಶ್‍ಮೂರ್ತಿ, ಹುಲ್ಲೂರು ಕುಮಾರ್‍ಸ್ವಾಮಿ, ಲಂಕೇಶ್ ವಿಚಾರ ವೇದಿಕೆಯ ಸಂಚಾಲಕ ಜಡೆಕುಂಟೆ ಮಂಜುನಾಥ್, ಕೊಟ್ಟಶಂಕರ್, ಪೆÇ್ರ.ಮಲ್ಲಿಕಾರ್ಜುನ್ ಆರ್.ಹಲಸಂಗಿ, ಬಿ.ಎಂ.ನಿರಂಜನ್, ಎಂ.ಆರ್.ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಒಳ ಮೀಸಲಾತಿ ಕುರಿತು ಮಾತನಾಡಿದರು.
