
CHITRADURGA NEWS | 09 AUGUST 2025
ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಒಳ ಮೀಸಲಾತಿ ನೀಡುವುದಕ್ಕಾಗಿ ರಾಜ್ಯ ಸರ್ಕಾರ ರಚಿಸಿರುವ ನಾಗಮೋಹನ್‍ದಾಸ್ ಆಯೋಗ ದತ್ತಾಂಶ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ, ಛಲವಾದಿ ಜನಾಂಗದ ನಿಖರವಾದ ಸಂಖ್ಯೆಯನ್ನು ತೋರಿಸದೆ ನಮಗೆ ಅನ್ಯಾಯವೆಸಗಿದೆ ಎಂದು ಛಲವಾದಿ ಸಮಾಜದ ಮುಖಂಡ ಹೆಚ್.ಸಿ.ನಿರಂಜನಮೂರ್ತಿ ಆಪಾದಿಸಿದರು.
ಇದನ್ನೂ ಓದಿ: KSRTC ಬಸ್ – ಲಾರಿ ನಡುವೆ ಡಿಕ್ಕಿ | 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಛಲವಾದಿ ಸಮುದಾಯ 50 ರಿಂದ 60 ಸಾವಿರದಷ್ಟಿದೆ. ಮನೆ ಮನೆ ಸಮೀಕ್ಷೆ ಸಂದರ್ಭದಲ್ಲಿ ಕೇವಲ ಎರಡು ಸಾವಿರ ನೊಂದಣಿಯಾಗಿರುವುದು ನಮ್ಮ ಮನಸ್ಸಿಗೆ ನೋವುಂಟು ಮಾಡಿದೆ.
ದತ್ತಾಂಶ ಸಂಗ್ರಹದಲ್ಲಿ ಲೋಪವಾಗಿದೆ. ಛಲವಾದಿ ಸಮಾಜಕ್ಕೆ ಸೇರಿದ ಕೆಲವರನ್ನು ಪರ್ಯಾಯವೆಂದು ಬೇರ್ಪಡಿಸಿ ಶೇ.1 ರಷ್ಟು ಮೀಸಲಾತಿ ನೀಡುವುದು ಸರಿಯಲ್ಲ. ಮಾಹಿತಿ ಸಂಗ್ರಹಿಸುವಲ್ಲಿ ಆಯೋಗ ತಪ್ಪು ಹೆಜ್ಜೆ ಇಟ್ಟಿದೆ. ಸಮೀಕ್ಷೆಯನ್ನು ಮರು ಪರಿಶೀಲಿಸಿ ನಮಗೆ ನ್ಯಾಯ ದೊರಕಿಸುವಂತೆ ಹೆಚ್.ಸಿ.ನಿರಂಜನಮೂರ್ತಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಸಮೀಕ್ಷೆಯ ಪ್ರಾರಂಭದಲ್ಲಿ ಪ್ರತಿ ಗಣತಿದಾರರಿಗೆ ಟ್ಯಾಬ್‍ಗಳನ್ನು ನೀಡದ ಕಾರಣ ಶಿಕ್ಷಕರಲ್ಲಿ ಗುಣ ಮಟ್ಟದ ಮೊಬೈಲ್‍ಗಳು ಇಲ್ಲದಿರುವುದರಿಂದ ಆಪ್ ಡೌನ್‍ಲೋಡ್ ಆಗದೆ ಸಮೀಕ್ಷೆ ಪ್ರಾರಂಭವಾಗಲಿಲ್ಲ.
ಇದನ್ನೂ ಓದಿ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರು
ಗುಣಮಟ್ಟದ ಮೊಬೈಲ್‍ಗಳನ್ನು ಹೊಂದಿರುವ ಕೆಲವರು ಮಾತ್ರ ಸಮೀಕ್ಷೆ ನಡೆಸಿ ಸಾವಿರಾರು ಕುಟುಂಬಗಳ ಮಾಹಿತಿ ಸಂಗ್ರಹಿಸಿದ ನಂತರವೂ ಆಯೋಗ ಆಪ್‍ನ್ನು ಅನ್‍ಇನ್ಸಾಟಲ್ ಮಾಡಲು ಸೂಚಿಸಿತು. ಇದರಿಂದ ಸಮೀಕ್ಷೆ ಪೂರ್ಣಗೊಳಿಸಿದ್ದ ಸಾವಿರಾರು ಕುಟುಂಬಗಳ ಅಂಕಿ ಅಂಶಗಳು ರದ್ದಾಯಿತು. ಹಾಗಾಗಿ ನಾನಾ ರೀತಿಯ ಗೊಂದಲಗಳು ಕಾಡುತ್ತಿರುವುದನ್ನು ಸರಿಪಡಿಸಬೇಕು ಎಂದರು.
ಸುದ್ದಿಗೊಷ್ಟಿಯಲ್ಲಿ ನ್ಯಾಯವಾದಿಗಳಾದ ಹೆಚ್.ಅಣ್ಣಪ್ಪಸ್ವಾಮಿ, ಶಶಾಂಕ್, ಛಲವಾದಿ ಸಮಾಜದ ಎಸ್.ಎನ್.ರವಿಕುಮಾರ್, ರಂಗಸ್ವಾಮಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
