By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ದೃಶ್ಯಕಲಾ ಕಾಲೇಜು | BVA ಪ್ರವೇಶಕ್ಕೆ ಅರ್ಜಿ ಆಹ್ವಾನ
    6 hours ago
    PM Awas (Urban) Scheme
    ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    6 hours ago
    NEET Exam
    ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
    6 hours ago
    crop insurance
    ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ 
    6 hours ago
    ವಂಚನೆಗೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು ಜಿ.ಎಚ್‌.ತಿಪ್ಪಾರೆಡ್ಡಿ ಅವರನ್ನು ಭೇಟಿ
    ಕೋಟ್ಯಾಂತರ ವಂಚನೆ | ಚಿತ್ರದುರ್ಗದ 470 ಮಹಿಳೆಯರಿಗೆ ಮೋಸ | ಆಂಧ್ರ ಮೂಲದ ಕಂಪನಿ ವಿರುದ್ಧ ದೂರು ದಾಖಲು
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    7 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 hours ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    7 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 hours ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    6 hours ago
    green things seem to give your skin a natural glow
    ಈ ಹಸಿರು ವಸ್ತುಗಳು ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆಯಂತೆ
    7 hours ago
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    1 day ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    1 day ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    2 days ago
Reading: Internal reservation: ಒಳಮೀಸಲಾತಿ ಹೋರಾಟಕ್ಕೆ ದಿಗ್ವಿಜಯ | ಮಾಜಿ ಸಚಿವ ಎಚ್.ಆಂಜನೇಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Internal reservation: ಒಳಮೀಸಲಾತಿ ಹೋರಾಟಕ್ಕೆ ದಿಗ್ವಿಜಯ | ಮಾಜಿ ಸಚಿವ ಎಚ್.ಆಂಜನೇಯ

News Desk Chitradurga News
Last updated: 2 August 2024 11:16
News Desk Chitradurga News
2 years ago
Share
H.ANJINEYA
ಎಚ್.ಆಂಜನೇಯ
SHARE

CHITRADURGA NEWS | 02 AUGUST 2024
ಚಿತ್ರದುರ್ಗ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕೆಂಬ ಮೂರು ದಶಕದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ಪ್ರಕಟಿಸಿದ ತೀರ್ಪು ಐತಿಹಾಸಿಕ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದ್ದಾರೆ.

‘ಕರ್ನಾಟಕ ಸರ್ಕಾರ ಒಳಮೀಸಲಾತಿ ಸಂಬಂಧ ಜಾರಿಗೆ ಮುಂದಾಗಿದ್ದ ನಡೆಗೆ ಸುಪ್ರೀಂಕೋರ್ಟ್‌ ಅಸ್ತು ಎನ್ನುವ ಮೂಲಕ ಮೀಸಲಾತಿ ವರ್ಗೀಕರಣ ಸಂವಿಧಾನಾತ್ಮಕ ನಿರ್ಧಾರ ಎಂಬ ಸಂದೇಶ ನೀಡಿದೆ. ಸತತ 30 ವರ್ಷಗಳಿಂದ ದಲಿತಪರ ಸಂಘಟನೆಗಳು, ಜನಪ್ರತಿನಿಧಿಗಳು ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರ ಫಲ ದೊರೆತಿದೆ. ಕತ್ತಲ ಬದುಕಿನಲ್ಲಿದ್ದ ಎಸ್ಟಿಯಲ್ಲಿ ಬಹಳಷ್ಟು ಸಮುದಾಯಗಳಿಗೆ ಕೋರ್ಟ್‌ ತೀರ್ಪು ಐಸಿಯು ನಲ್ಲಿದ್ದವರಿಗೆ ಬದುಕುವ ಭರವಸೆಯಂತೆ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

‘ಒಳಮೀಸಲಾತಿ ಜಾರಿ ಸಂಬಂಧ ಹೋರಾಟ ತೀವ್ರಗೊಂಡ ಸಂದರ್ಭ ಅಂದಿನ ಕಾಂಗ್ರೆಸ್‌ ಸರ್ಕಾರ ನ್ಯಾ.ಸದಾಶಿವ ನೇತೃತ್ವದಲ್ಲಿ ಆಯೋಗ ರಚಿಸುವ ಮೂಲಕ ಹೋರಾಟಕ್ಕೆ ಸ್ಪಂದಿಸಿತ್ತು. ಸದಾಶಿವ ಆಯೋಗ ವರದಿ ನೀಡಿದ್ದರೂ ಅದನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವಲ್ಲಿ ಹಲವು ಅಡ್ಡಿ ಆತಂಕಗಳು ಎದುರಾಗಿದ್ದವು. ಆದರೆ, ಪ್ರಸ್ತುತ ಕೋರ್ಟ್‌ ತೀರ್ಪು ಸದಾಶಿವ ಆಯೋಗದ ವರದಿ ಜಾರಿಗೆ ಆನೆಬಲ ನೀಡಿದೆ. ಆದ್ದರಿಂದ ಹೋರಾಟ ಹುಟ್ಟಿದ ಕರ್ನಾಟಕ ಮತ್ತು ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕೂಡಲೇ ಒಳಮೀಸಲು ಸೌಲಭ್ಯ ಕಲ್ಪಿಸಲು ಸರ್ಕಾರಗಳು ಮುಂದಾಗಬೇಕು. ಈಗಾಗಲೇ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸುವುದನ್ನು ರದ್ದುಗೊಳಿಸಿ, ಮೀಸಲಾತಿ ವರ್ಗೀಕರಣಗೊಂಡ ಬಳಿಕ ಅರ್ಜಿ ಆಹ್ವಾನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು

ಆರಂಭದಿಂದಲೂ ಒಳಮೀಸಲು ಪರವಿದ್ದ ಕಾಂಗ್ರೆಸ್‌ ಈ ಬಾರಿಯ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಲಿಖಿತವಾಗಿ ಘೋಷಿಸಿತ್ತು. ಜೊತೆಗೆ ಒಳಮೀಸಲು ಸಂಬಂಧ ಸಿದ್ದರಾಮಯ್ಯ ಸರ್ಕಾರ ಆರು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈಗಿನ ಕೋರ್ಟ್‌ ತೀರ್ಪು ದಲಿತಪರ ಹೋರಾಟಕ್ಕೆ ಹಾಗೂ ಕಾಂಗ್ರೆಸ್‌ ಪಕ್ಷದ ನಡೆಗೆ ಜಯ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಒಳಮೀಸಲಾತಿ ಕೇವಲ ಮಾದಿಗ, ಛಲವಾದಿ ಸಮುದಾಯಗಳಿಗೆ ಅನುಕೂಲ ಆಗಲಿದೆ ಎಂಬ ತಪ್ಪುಗ್ರಹಿಕೆಗೆ ಕೋರ್ಟ್‌ ತೀರ್ಪು ಉತ್ತರವಾಗಿದೆ. ಪರಿಶಿಷ್ಟ ಜಾತಿಯಲ್ಲಿರುವ ಯಾವುದೇ ಜಾತಿಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಜೊತೆಗೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ. ಆದ್ದರಿಂದ ಪರಿಶಿಷ್ಟ ಗುಂಪಿನಲ್ಲಿರುವ ಯಾವುದೇ ಜಾತಿ ಜನ ಆತಂಕ ಪಡಬೇಕಾಗಿಲ್ಲ. ನಾವೆಲ್ಲರೂ ಒಂದೇ ತಂದೆ-ತಾಯಿ ಮಕ್ಕಳಾಗಿದ್ದು, ಜನಸಂಖ್ಯೆಗೆ ಅನುಗುಣವಾಗಿ ತಮ್ಮ ತಮ್ಮ ಪಾಲಿನ ಹಕ್ಕು ಪಡೆದುಕೊಳ್ಳುವುದೇ ಮೀಸಲಾತಿ ವರ್ಗೀಕರಣದ ಮೂಲ ಉದ್ದೇಶ. ಜೊತೆಗೆ ಕೋರ್ಟ್‌ ಕೂಡ ಸಮ್ಮತಿ ನೀಡಿದೆ ಎಂದು ಹೇಳಿದ್ದಾರೆ.

ಕೇವಲ ಕೋರ್ಟ್‌ ತೀರ್ಪು ಕರ್ನಾಟಕ ರಾಜ್ಯಕ್ಕಷ್ಟೇ ಸೀಮಿತಗೊಳಿಸದೆ, ಕೇಂದ್ರದಲ್ಲಿರುವ ಎನ್‌ಡಿಎ ಸರ್ಕಾರ ರಾಷ್ಟ್ರವ್ಯಾಪಿ ಮೀಸಲಾತಿ ವರ್ಗೀಕರಣಕ್ಕೆ ಮುಂದಾಗಬೇಕು. ಈ ಸಂಬಂಧ ನಮ್ಮ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕೂಡ ಧ್ವನಿಯೆತ್ತಲಿದ್ದಾರೆ. ಮುಖ್ಯವಾಗಿ ತೆಲಂಗಾಣದಲ್ಲಿ ಚುನಾವಣೆ ಸಂದರ್ಭ ಮಾದಿಗ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಮಾತನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗುಡಿಸಲಿಗೆ ಬಿತ್ತು ಬೆಂಕಿ | ಬೀದಿಗೆ ಬಿದ್ದ ಮೂರು ಕುಟುಂಬ

ಮೀಸಲಾತಿ ವರ್ಗೀಕರಣಕ್ಕೆ ಕೋರ್ಟ್‌ ಒಪ್ಪುವುದಿಲ್ಲ ಎಂಬ ಕೆಲ ಪಟ್ಟಭದ್ರಹಿತಾಸಕ್ತಿಗಳು ಪದೇ ಪದೇ ನೀಡುತ್ತಿದ್ದ ಹೇಳಿಕೆಗೆ ತಕ್ಕ ಉತ್ತರ ನೀಡಿದೆ. ಪರಿಶಿಷ್ಟ ಜಾತಿ ಗುಂಪಿನಲ್ಲಿ 100ಕ್ಕೂ ಹೆಚ್ಚು ಜಾತಿಗಳಿದ್ದರೂ ಸಹೋದರರ ರೀತಿ ಸೌಹಾರ್ದ ಜೀವನ ನಡೆಸುತ್ತಿರುವುದಕ್ಕೆ ಒಳಮೀಸಲಾತಿ ಜಾರಿ ಇನ್ನಷ್ಟು ಬಲ ತಂದುಕೊಡಲಿದೆ.

ಪರಸ್ಪರ ಅಪನಂಬಿಕೆಗಳಿಗೆ ಕಡಿವಾಣ ಬೀಳಲಿದೆ. ಜನಸಂಖ್ಯೆಗೆ ಅನುಗುಣವಾಗಿ ಅವರವರ ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಎಲ್ಲ ಸಮುದಾಯಗಳು ಸಮಗ್ರವಾಗಿ ಪ್ರಗತಿ ಸಾಧಿಸಲು ಸಹಕಾರಿ ಆಗಲಿದೆ. ಆದ್ದರಿಂದ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೆ ಮುಂದಾಗುವ ಮೂಲಕ ಇಡೀ ರಾಷ್ಟ್ರಕ್ಕೆ ಮಾದರಿ ಜೊತೆಗೆ ಕ್ರಾಂತಿಕಾರಿ ಹೆಜ್ಜೆ ಇಡಬೇಕು ಎಂದು ಆಗ್ರಹಿಸಿದ್ದಾರೆ.

ಸದಾ ನೊಂದ ಜನರು, ಅದರಲ್ಲೂ ದಲಿತರ ಪರ ಹತ್ತಾರು ಯೋಜನೆ ಜಾರಿಗೊಳಿಸಿ, ದೇಶದಲ್ಲಿಯೇ ಎಸ್‌ಟಿಪಿ, ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಲು ನಾನು ಸಚಿವನಾಗಿದ್ದ ಸಂದರ್ಭ ನನ್ನ ಬೆನ್ನಿಗೆ ನಿಂತಿದ್ದ ಹಾಗೂ ದೇಶದಲ್ಲಿಯೇ ಅಹಿಂದ ನೇತಾರ ಎಂಬ ಹೆಗ್ಗಳಿಕೆ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಂಡು ಇಡೀ ದೇಶವೇ ಕರ್ನಾಟಕದ ನಡೆಯತ್ತ ನೋಡುವ ರೀತಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:DigvijayaFormer MinisterGovernmentH.AnjaneyaInternal ReservationStruggleSupreme Courtಎಚ್.ಆಂಜನೇಯಒಳಮೀಸಲಾತಿದಿಗ್ವಿಜಯಮಾಜಿ ಸಚಿವಸರ್ಕಾರಸುಪ್ರೀಂ ಕೋರ್ಟ್ಹೋರಾಟ
Share This Article
Facebook Email Print
Previous Article POCSO case POCSO case: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
Next Article bhovi sri Internal Reservation: ಸುಪ್ರೀಂ ತೀರ್ಪು ಬಡ ಕುಟುಂಬಗಳ ಅಭಿವೃದ್ಧಿಗೆ ದಿಕ್ಸೂಚಿ | ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
ಹೊಸದುರ್ಗ
ಅರ್ಜಿ ಅಹ್ವಾನ
ದೃಶ್ಯಕಲಾ ಕಾಲೇಜು | BVA ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
PM Awas (Urban) Scheme
ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಮುಖ್ಯ ಸುದ್ದಿ
NEET Exam
ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up