Connect with us

    State Award: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

    ದಾಖಲೆಯ ಮಾನವ ಸರಪಳಿ ನಿರ್ಮಾಣ

    ಮುಖ್ಯ ಸುದ್ದಿ

    State Award: ಮಾನವ ಸರಪಳಿ ರಚನೆ | ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ | ನ.26 ರಂದು ಪ್ರಶಸ್ತಿ ಪ್ರದಾನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 23 NOVEMBER 2024

    ಚಿತ್ರದುರ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ರಾಜ್ಯದಲ್ಲೇ ಅತ್ಯಂತ ಉದ್ದವಾದ ಮಾನವ ಸರಪಳಿ ರಚನೆ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ (State Award) ಪ್ರಥಮ ಸ್ಥಾನ ದೊರೆತಿದೆ.

    2024 ಸೆಪ್ಟಂಬರ್ 15 ರಂದು ರಾಜ್ಯದಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಈ ಮಾನವ ಸರಪಳಿ World book of records ಸೇರ್ಪಡೆಗೊಂಡಿತ್ತು.

    ಚಿತ್ರದುರ್ಗ ಜಿಲ್ಲೆಗೆ ‘ಅತ್ಯಂತ ಉದ್ದದ ಮಾನವ ಸರಪಳಿ’ ರಚಿಸಲಾಗಿತ್ತು. ಈ ಸರಪಳಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ದೊರೆತಿದೆ.

    ‘ಅತಿ ಹೆಚ್ಚು ಸ್ವಯಂ ಸೇವಾ ಸಂಘಗಳ ಭಾಗವಹಿಸುವಿಕೆ’ ವಿಭಾಗದಲ್ಲಿ ದ್ವಿತಿಯ ಸ್ಥಾನ ಪಡೆದುಕೊಂಡಿದೆ.

    ಈ ಸಂಬಂಧ ದಿನಾಂಕ ನ.26 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ವಿತರಿಸಲಿದ್ದಾರೆ.

    ಜಿಲ್ಲೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top