CHITRADURGA NEWS | 29 OCTOBER 2025
ಚಿತ್ರದುರ್ಗ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: 100 ಮೀ ಹರ್ಡಲ್ಸ್ ನಲ್ಲಿ ಗೂಳಯ್ಯನಹಟ್ಟಿಯ ಮೊರಾರ್ಜಿ ಶಾಲೆ ವಿದ್ಯಾರ್ಥಿನಿ ಪ್ರಥಮ | ರಾಜ್ಯಮಟ್ಟಕ್ಕೆ ಆಯ್ಕೆ
ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.
ಒಟ್ಟು 21 ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ ಅವಕಾಶ ಒದಗಿಸಲಾಗುವುದು.
ವಿವರ ಹೀಗಿದೆ:
ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು.
ಇಂಟನ್ರ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು.
ಇದನ್ನೂ ಓದಿ: ಏತ ನೀರಾವರಿ ಯೋಜನೆ ರೈತರಿಗೆ ಅನುಕೂಲ ಆಗಿದೆ | ಡಾ.ಎಂ.ಚಂದ್ರಪ್ಪ
ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು 2025 ರ ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

