CHITRADURGA NEWS | 17 November 2026
ಚಿತ್ರದುರ್ಗ: ಅಕ್ರಮ ಸಂಬಂಧದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಳ್ಳಕೆರೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಪರಿಶಿಷ್ಟ ಪಂಗಡದ ಯುವಕರಿಗೆ ಉಚಿತ ಸೋಲಾರ್ ತರಬೇತಿ | ಅರ್ಜಿ ಅಹ್ವಾನ
ಚಳ್ಳಕೆರೆ ತಾಲ್ಲೂಕಿನ ನಕ್ಲಾರಹಟ್ಟಿ ಗ್ರಾಮದ ವ್ಯಕ್ತಿಯೊಬ್ಬರು ನವೆಂಬರ್ 15ರಂದು ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಸಂಬಂಧಿಕರೊಬ್ಬರನ್ನು ಅಕ್ರಮ ಸಂಬಂಧದ ವಿಚಾರವಾಗಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು.
ನವೆಂಬರ್ 10ರಂದು ಆರೋಪಿಗಳು ಒಟ್ಟಾಗಿ ಸೇರಿ ವ್ಯಕ್ತಿಯೊಂದಿಗೆ ಗಲಾಟೆ ನಡೆಸಿ, ಮಾರಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಮೊ.ಸಂ. 453/2026, ಕಲಂ 103(1), 238, 351(2), 3(5) ಬಿಎನ್ಎಸ್-2023ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ್.ಆರ್., ಹಿರಿಯೂರು ಉಪವಿಭಾಗದ ಡಿವೈಎಸ್ಪಿ ಹಾಗೂ ಚಳ್ಳಕೆರೆ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ: ಚನ್ನಗಿರಿ, ತೀರ್ಥಹಳ್ಳಿ, ಭದ್ರಾವತಿ ಹಾಗೂ ರಾಜ್ಯದ ಅಡಿಕೆ ಧಾರಣೆ
ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಕೇಶವ್, ಸಿಬ್ಬಂದಿಗಳಾದ ತಿಮ್ಮಪ್ಪ, ಗಂಗಾಧರ, ಅಶೋಕರೆಡ್ಡಿ, ವೆಂಕಟೇಶ್, ತಿಲಕರಾಜ್, ಅವಿನಾಶ್, ಸರಿತಾ, ಭಾಗ್ಯಮ್ಮ, ಗಿರಿಯಮ್ಮ, ಶೃತಿ ಕೆ.ಟಿ. ಹಾಗೂ ನಾಯಕರಹಟ್ಟಿ ಠಾಣೆಯ ಸಿಬ್ಬಂದಿ ಬಿ.ವಿ. ರವಿಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮೂವರು ಆರೋಪಿಗಳನ್ನು ನವೆಂಬರ್ 17ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

