
ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ತಾಲೂಕಿನ ರಂಗೇನಹಳ್ಳಿಯ ಎರಡು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಅಬ್ಬಿನಹೊಳೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆ, ಕಲ್ಯಾಣದುರ್ಗ ತಾಲೂಕು, ಮಾಕುಡುಕಿ ಗ್ರಾಮದ ಮರಿಸ್ವಾಮಿ ಬಂಧಿತ ಆರೋಪಿ. ಗುರುವಾರ ಬಂಧಿತನಾದ ಈತನಿಂದ 4.50 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಸೇನೆ, ರೈಲ್ವೇಯಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ಮಾಜಿ ಸೈನಿಕನ ಬಂಧನ
ಅಂತಾರಾಜ್ಯ ಕಳ್ಳತನ ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದ ಈತನನ್ನ ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ತಂಡವೊಂದನ್ನು ರಚಿಸಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್ಪಿ ರಾಜಣ್ಣ, ಅಬ್ಬಿನಹೊಳೆ ಪಿಎಸ್ಐ ಬಾಹುಬಲಿ ಎಂ ಪಡನಾಡ, ಸಿಬ್ಬಂದಿಗಳಾದ ನಾಗರಾಜ, ರುದ್ರಪ್ಪ, ಕವಿರಾಜ್, ಮಂಜನಾಥ್, ನಿಂಗರಾಜ್ ಮತ್ತಿತರರು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

