
CHITRADURGA NEWS | 29 AUGUST 2025
ಚಿತ್ರದುರ್ಗ: ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಗ್ರಾಮ, ಹೋಬಳಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್, ಡಾ.ಜಗಜೀವನ ರಾಂ ಹಾಗೂ ಸೇವಲಾಲ್ ಭವನಗಳನ್ನು ನಿರ್ವಹಣೆ ಮಾಡಲು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರ ನಿಗದಿ ಪಡಿಸಿದ ಮೊತ್ತದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ 3 ಜನ ನಾಮನಿರ್ದೇಶಿತ ಸಮಿತಿ ಭವನಗಳ ನಿರ್ವಹಣೆ ಮಾಡಲಿದೆ. ಪರಿಶಿಷ್ಟ ಜಾತಿಗೆ ಸೇರಿದ ಗಣ್ಯರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಯುವಕರಿಂದ ವಿನೂತನ ಪ್ರಯತ್ನ | ಸರ್ಕಾರಿ ಶಾಲೆ ರೀತಿಯಲ್ಲಿ ಗಣಪತಿ ಮಂಟಪ | ಇಲ್ಲಿ ಗಣೇಶನೇ ಮೇಸ್ಟ್ರು
ಆಸಕ್ತರು ಜಾತಿ ಪ್ರಮಾಣ ಪತ್ರ, ಆಧಾರ್ ಪ್ರತಿ, ಗುರುತಿನ ಚೀಟಿ, ಸಂಬಂಧಪಟ್ಟ ಗ್ರಾಮದ ಪಿಡಿಓ ಅವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಇತ್ತೀಚಿನ 2 ಭಾವಚಿತ್ರ, ಪರಿಶಿಷ್ಟ ಜಾತಿ ಜನಾಂಗ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಕುರಿತ ಪ್ರಸಂಶನಾ ಪತ್ರಗಳೊಂದಿಗೆ ಸೆಪ್ಟೆಂಬರ್ 3 ರ ಒಳಗೆ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
