CHITRADURGA NEWS | 28 MAY 2026
ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ರವೀಂದ್ರ ಅಮಾನತು
ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ಸ್ವಂತ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲ್ಲೂಕುಗಳ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳ ಸಮೇತ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
