
CHITRADURGA NEWS | 17 NOVEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ದೇವದಾಸಿ ಪುನರ್ವಸತಿ ಯೋಜನೆ, ಉದ್ಯೋಗಿನಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 17 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2025ರ ಡಿಸೆಂಬರ್ 15 ಕೊನೆಯ ದಿನವಾಗಿದೆ.
ಧನಶ್ರೀ ಯೋಜನೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಅರ್ಜಿದಾರರು ಅರ್ಜಿಯನ್ನು ಆನ್‍ಲೈನ್ ಮತ್ತು ಆಫ್‍ಲೈನ್‍ಗಳಲ್ಲಿ ಸಲ್ಲಿಸಬಹುದು. ಈ ಎರಡು ಯೋಜನೆಗಳಿಗೆ ಅರ್ಜಿಯನ್ನು ಆಫ್‍ಲೈನ್‍ನಲ್ಲಿ ಸಲ್ಲಿಸುವವರು ನಿಗಧಿಪಡಸಿದ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವುದು.
ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸೀಡಿಂಗ್ ಮಾಡಿಸಿರಬೇಕು. ಈ ಹಿಂದಿನ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಬಿಸಿಯೂಟ ಯೋಜನೆ ಸ್ವಾಗತರ್ಹ | ಬಿ.ಪಿ.ತಿಪ್ಪೇಸ್ವಾಮಿ
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಮಗ ಕಚೇರಿ, ಚಿತ್ರದುರ್ಗ, ದೂರವಾಣಿ ಸಂಖ್ಯೆ 7019967954 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
