
CHITRADURGA NEWS | 25 SEPTEMBER 2025
ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸಲ್ಮಾನರು, ಜೈನ್, ಆಂಗ್ಲೋ ಇಂಡಿಯನ್ಸ್, ಬೌದ್ದರು, ಸಿಖ್ಖರು, ಹಾಗೂ ಪಾರ್ಸಿ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಜನಾಂಗದವರಿಗೆ ಹಲವು ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ನೌಕರ ಶಿವಮೂರ್ತಿ ನಿಧನ

ಶ್ರಮ ಶಕ್ತಿ ಸಾಲ, ಸ್ವಾವಲಂಬಿ ಸಾರಥಿ, ವೃತ್ತಿ ಪ್ರೋತ್ಸಹ, ವಿದೇಶಿ ವ್ಯಾಸಂಗ ಸಾಲ, ಸಾಂತ್ವಾನ, ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಸಹಾಯಧನ, ವ್ಯಾಪಾರ ಅಥವಾ ಉದ್ಯಮಿಗಳಿಗೆ ನೇರಸಾಲ ಯೋಜನೆಗಳಡಿ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಸೌಲಭ್ಯ ನೀಡಲಾಗುವುದು.
ಅರ್ಜಿ ಸಲ್ಲಿಸುವವರು ರಾಜ್ಯದ ಖಾಯಂ ನಿವಾಸಿಯಾಗಿದ್ದು, ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಶ್ರಮಶಕ್ತಿ ಸಾಲ ಯೋಜನೆಗೆ ರೂ.3,50,000/- ವೃತ್ತಿ ಪ್ರೋತ್ಸಾಹ ಯೋಜನೆಗೆ ನಗರ ಪ್ರದೇಶದವರಿಗೆ ರೂ.10,3,000/- ಗ್ರಾಮೀಣ ಪ್ರದೇಶದವರಿಗೆ ರೂ.8,00,000/- ಹಾಗೂ ಇತರೆ ಯೋಜನೆಗೆ ರೂ.6,00,000/- ಕುಟುಂಬದ ವಾರ್ಷಿಕ ಆದಾಯ ಮಿತಿ ಹೊಂದಿರಬೇಕು.
18 ರಿಂದ 55 ವರ್ಷದೊಳಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಹಾಗೂ ಪಡಿತರ ಚೀಟಿಯನ್ನು ಹೊಂದಿರುವುದರ ಜೊತೆಗೆ, ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಬ್ಯಾಂಕ್‍ಗಳಲ್ಲಿ ಬ್ಯಾಂಕ್ ಖಾತೆ ಇರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರಾಗಿರಬಾರದು. ನಿಗದ ವಿವಿಧ ಯೋಜನೆಗಳಡಿಯಲ್ಲಿ ಈಗಾಗಲೆ ಸಾಲಸೌಲಭ್ಯ ಪಡೆದಿರಬಾರದು.
ಇದನ್ನೂ ಓದಿ: ಪಿ.ರಘು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿ ನೇಮಕ
ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ. ವೆಬ್‍ಸೈಟ್ www.kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಪ್ರತಿಯನ್ನು ನಿಗಮ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕಚೇರಿ ಸಂಪರ್ಕಿಸುವಂತೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
