CHITRADURGA NEWS | 14 FEBRUARY 2026
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಕೋಟೆ ನಾಡಿನಲ್ಲಿ ಫೆ.17 ಮತ್ತು 18 ರಂದು ನಡೆಯುವ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸುವಂತೆ ಕರುನಾಡ ವಿಜಯಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿ ಮಾಲೀಕರುಗಳಿಗೆ ಮತ್ತು ಸಾರ್ವಜನಿರಲ್ಲಿ ವಿನಂತಿಸಿದರು.

ಇದನ್ನೂ ಓದಿ: ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ
ಗಾಂಧಿವೃತ್ತ, ದೊಡ್ಡಪೇಟೆ, ಆನೆಬಾಗಿಲು ರಸ್ತೆ, ಪ್ರಮುಖ ಬೀದಿ ಹಾಗೂ ಸಂತೆಹೊಂಡದ ರಸ್ತೆಯಲ್ಲಿ ಪ್ರತಿ ಅಂಗಡಿಗಳಿಗೆ ತೆರಳಿದ ಕಾರ್ಯಕರ್ತರು ಕಡ್ಡಾಯವಾಗಿ ಕನ್ನಡ ನಾಮಫಲಗಳನ್ನು ಅಂಗಡಿ ಮೇಲೆ ಬರೆಸಬೇಕು. ಇಲ್ಲವಾದಲ್ಲಿ ನಾವುಗಳೆ ಆಂಗ್ಲ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆಂದು ಎಚ್ಚರಿಸಿದರು.
ಚಿತ್ರದುರ್ಗದಲ್ಲಿ 2 ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕನ್ನಡ, ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಎಲ್ಲರೂ ಒತ್ತು ಕೊಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ | ನಗರಸಭೆ ಪ್ರಕಟಣೆ
ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಯುವ ಘಟಕದ ಘನಶ್ಯಾಂ, ಮಲ್ಲಪ್ರಸಾದ್ ಕುಮಾರ್, ಉಮೇಶ್, ಮಂಜುಳ, ಉಮ, ಲಕ್ಷ್ಮಣ, ರಾಜಪ್ಪ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ನಿಸಾರ್ ಅಹಮದ್, ಹಿರಿಯೂರು ಅಧ್ಯಕ್ಷ ತಿಪ್ಪೇಸ್ವಾಮಿ, ಶರತ್, ಜಗದೀಶ್, ಮುಜಾಹಿದ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
