
CHITRADURGA NEWS | 05 JULY 2025
ಚಿತ್ರದುರ್ಗ: 2025-26ನೇ ಸಾಲಿಗೆ ಬಿ.ಎಸ್‍ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ. ಸೆಪ್ಪೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: T.Raghumurthy: ತುರುವನೂರು | ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ರಘುಮೂರ್ತಿ ಚಾಲನೆ
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.
ಅರ್ಹತೆಗಳು: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕೋರ್ಸ್‍ನ ಅವಧಿ ಪೂರ್ಣಾವಧಿ. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯ ಅನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳು ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಬೇಕು.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ ಎನ್‍ಪಿಸಿಐ ಮ್ಯಾಪಿಂಗ್ ಆ್ಯಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
