
CHITRADURGA NEWS | 05 July 2025
ಚಿತ್ರದುರ್ಗ: ನಗರಸಭೆ(municipal) ಹಾಗೂ ಎಸ್.ಎಫ್.ಸಿ ನಿಧಿಯಡಿ 2025-26ನೇ ಸಾಲಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Also Read: BUS : ಬೈಕಿಗೆ ಬಸ್ ಡಿಕ್ಕಿ | ನಡು ರಸ್ತೆಯಲ್ಲೇ ಧಗ ಧಗನೆ ಉರಿದ ಬಸ್

ಶೇ.24.10 ಹಾಗೂ ಶೇ.7.25 ಕ್ರಿಯಾಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ಎಸ್.ಎಸ್.ಎಲ್.ಸಿ ಯಿಂದ ಸ್ನಾತಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಎಲ್.ಎಲ್.ಬಿ ಪದವಿ ಪಡೆದು ವೃತ್ತಿ ನಿರತ ವಕೀರಲರಿಗೆ ಪುಸ್ತಕ ಖರೀದಿಗೆ ಸಹಾಯಧನ ನೀಡಲಾಗುವುದು.
ಇದರೊಂದಿಗೆ ನಗರ ವ್ಯಾಪ್ತಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆ ನಿರ್ಮಾಣ ಮಾಡುವ ಫಲಾನುಭವಿಗಳಿಗೆ ಸಹಾಯ ಧನ ನೀಡುವ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.
ಶೇ.5ರ ಯೋಜನೆಯಡಿ ವಿಕಲಚೇತನರಿಗೆ ಯಂತ್ರಚಾಲಿತ 3 ಚಕ್ರ ವಾಹನ ಖರೀದಿಸಿ ನೀಡಲಾಗುವುದು.
Also Read: ಅಡಿಕೆ ಧಾರಣೆ | ಜುಲೈ 04 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ವಾಸವಿರುವ ಅರ್ಹರು ಸೆಪ್ಟೆಂಬರ್ 30 ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://www.chitradurgacity.mrc.gov.in ಕಚೇರಿ ವಿಷಯ ನಿರ್ವಾಹಕರನ್ನು ಸಂಪರ್ಕಿಸುವಂತೆ ಚಿತ್ರದುರ್ಗ ನಗರಸಭೆ( municipal) ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
