CHITRADURGA NEWS | 23 June 2025
ಚಿತ್ರದುರ್ಗ: ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ) ವೆಬ್‍ಸೈಟ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಖಾತೆಗೆ ಇ-ಕೆ.ವೈಸಿ ಕಡ್ಡಾಯವಾಗಿ ಮಾಡಿಸಿ ನಂತರ ಅರ್ಜಿ ಸಲ್ಲಿಸಬೇಕು.
Also Read: ಚಿತ್ರದುರ್ಗದ ಮುಖ್ಯ ರಸ್ತೆಗೆ ನರೇಂದ್ರ ಮೋದಿ ಹೆಸರು ನಾಮಕರಣ
ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎ.ಟಿ.ಎಸ್ ಸಂಖ್ಯೆ, ಆಧಾರ್ ಕಾರ್ಡ್, ತಂದೆ-ತಾಯಿ/ಪಾಲಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್, 1 ರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳ ಕುಟುಂಬ ಆದಾಯ ರೂ.6.00 ಲಕ್ಷ ಮೀರಿರಬಾರದು, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಕುಟುಂಬ ಆದಾಯ ರೂ.2.50 ಲಕ್ಷ ಮೀರಿರಬಾರದು, ಹಾಗೂ ಕಡ್ಡಾಯವಾಗಿ ಮೊಬೈಲ್ ನಂಬರೊಂದಿಗೆ, ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್‍ನ್ನು ಎನ್.ಪಿ.ಸಿ.ಐ ನಲ್ಲಿ ಸೀಡಿಂಗ್ ಮಾಡಿಸಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಆಯಾ ಕಾಲೇಜು ಪ್ರಾಂಶುಪಾಲರನ್ನು ಸಂಪರ್ಕಿಸಬೇಕು ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
