
CHITRADURGA NEWS | 01 MARCH 2026
ಚಿತ್ರದುರ್ಗ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.
ಇದನ್ನೂ ಓದಿ: ಇಂದಿನ ವೇಗದ ಬದುಕಿನಲ್ಲಿ ವ್ಯಾಯಾಮ, ಓಟ, ನಡಿಗೆ ಮತ್ತು ಯೋಗ ಚಟುವಟಿಕೆಗಳು ಅತ್ಯಗತ್ಯ

ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ
ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.
ಜಿಲ್ಲಾಡಳಿತದ ಕ್ರಮಗಳು :
ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.
ಸಹಾಯವಾಣಿ ಸಂಖ್ಯೆಗಳಿಗೆ ಚಿತ್ರದುರ್ಗ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು.
ಇದನ್ನೂ ಓದಿ: ಮಾರ್ಚ್ 02 ರಂದು ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನಗಳ ವಿತರಣೆ
ಚಿತ್ರದುರ್ಗ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08194-222538, 08194-222811 ಅಥವಾ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, 080-22253707 , ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.
ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:
ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.
ಇದನ್ನೂ ಓದಿ: ಉತ್ತರಾಖಂಡ್ ಡಯಟ್ ತಂಡದಿಂದ ಕಾವಾಡಿಗರಹಟ್ಟಿ ಪಿ.ಎಂ.ಶ್ರೀ ಶಾಲೆಗೆ ಭೇಟಿ
ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
