
CHITRADURGA NEWS | 02 November 2025
ಹೊಳಲ್ಕೆರೆ: ತಾಲ್ಲೂಕಿನ ಸಾಸಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಈಶ್ವರಸ್ವಾಮಿ ದೇವಸ್ಥಾನ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಮಹಾ ಗಣಪತಿ ದೇವಸ್ಥಾನವನ್ನು ಶಾಸಕ ಎಂ.ಚಂದ್ರಪ್ಪ ಉದ್ಘಾಟಿಸಿದರು.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ನಂತರ ಮಾತನಾಡಿದ ಶಾಸಕರು, ಗ್ರಾಮಸ್ಥರೆಲ್ಲಾ ಸೇರಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದ ಅದ್ಬುತವಾದ ದೇವಸ್ಥಾನ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಸಲು ಗ್ರಾಮದಲ್ಲಿ ದೇವಸ್ಥಾನ ಪುಷ್ಕರಣಿ ಅಷ್ಟೆ ಅಲ್ಲ, ಯಾರಾದರೂ ವಿವಾಹ ಮಾಡಿಕೊಳ್ಳಲು ಅದ್ಬುತವಾದ ವೇದಿಕೆಯನ್ನು ನಿರ್ಮಾಣ ಮಾಡಿದ್ದೀರ. ಕುಡಿಯುವ ನೀರು, ರಸ್ತೆ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಈ ಗ್ರಾಮಕ್ಕೆ ಒದಗಿಸಿದ್ದೇನೆ.
25 ಲಕ್ಷ ರೂ.ಗಳನ್ನು ದೇವಸ್ಥಾನಕ್ಕೆ ಕೊಟ್ಟಿದ್ದೇನೆ. ಪುಷ್ಕರಣಿಗೆ ಒಂದು ಕೋಟಿ ರೂ.ಗಳನ್ನು ನೀಡಿದ್ದೇನೆ. ಆದರೆ ಧರ್ಮಸ್ಥಳದವರು ದೇವಸ್ಥಾನಕ್ಕೆ ಹಣ ನೀಡಿದ್ದರಿಂದ 25 ಲಕ್ಷ ರೂ.ಗಳನ್ನು ಬೇರೆ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಇದೊಂದು ಪವಿತ್ರ ಪ್ರೇಕ್ಷಣೀಯ ಸ್ಥಳವಾಗಬೇಕು. ವಿನೂತನವಾಗಿ ನಿರ್ಮಿಸಿರುವ ದೇವಸ್ಥಾನದಲ್ಲಿ ದಿನನಿತ್ಯವೂ ಪೂಜೆ ಪುನಸ್ಕಾರಗಳು ನಡೆಯುವಂತಾಗಲಿ ಎಂದು ತಿಳಿಸಿದರು.
ಪಾಂಡೋಮಟ್ಟಿ ಕಮ್ಮತ್ತಹಳ್ಳಿ ವಿರಕ್ತಮಠದ ಡಾ.ಗುರುಬಸವ ಮಹಾಸ್ವಾಮಿ, ಮಾಡಾಳು ನಿರಂಜನಪೀಠದ ರುದ್ರಮುನಿ ಮಹಾಸ್ವಾಮಿಗಳವರು ಸಾನಿಧ್ಯ ವಹಿಸಿದ್ದರು.
ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ | ಕೋಟೆನಾಡಿನಲ್ಲಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಬಿ.ಕೆ.ಸುಮಿತ್ರಕ್ಕ, ಎ.ಸದಾಶಿವಪ್ಪ, ಮಂಜುನಾಥ್, ನಾಗಶ್ರೀ ತ್ಯಾಗರಾಜ್, ಡಾ.ಬಸವ ನೆಲ್ಲಿಸರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಲಕ್ಷ್ಮಿದೇವಿ ಎಸ್.ರಂಗಸ್ವಾಮಿ, ಶಿವಕುಮಾರ್, ಹನುಮಂತಪ್ಪ, ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತಾಧಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
