CHITRADURGA NEWS | 12 AUGUST 2026
ಚಿತ್ರದುರ್ಗ: ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಲು ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಾಯವಾಗಲು ಪ್ರತಿ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ. ಪ್ರತಿಯೊಬ್ಬರೂ ಜಂತು ಮಾತ್ರೆ ಸೇವಿಸಿ ಜಂತು ಬಾಧೆಯಿಂದ ಮುಕ್ತರಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಹೇಳಿದರು.
ಇದನ್ನೂ ಓದಿ: ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಗರದ ಎಸ್‍ಎಮ್‍ಎಸ್ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ. ಕೃಷ್ಣನಾಯಕ್ ಮಾತನಾಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಹಣ್ಣು-ತರಕಾರಿಗಳನ್ನು ಬಳಸುವ ಮುನ್ನ ಶುದ್ಧ ನೀರಿನಲ್ಲಿ ತೊಳೆಯಬೇಕು. ಹೊರಗೆ ಓಡಾಡುವಾಗ ಕಡ್ಡಾಯವಾಗಿ ಪಾದರಕ್ಷೆ ಧರಿಸುವ ಮೂಲಕ ಜಂತು ಬಾಧೆಗೆ ತುತ್ತಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರೆಡ್ಡಿ ಕೊಣ್ಣೂರ್ ಮಾತನಾಡಿ, ಊಟಕ್ಕೆ ಮುನ್ನ, ಶೌಚಾಲಯ ಬಳಸಿದ ನಂತರ ಹಾಗೂ ಕಸ-ಗಲೀಜಿನಲ್ಲಿ ಕೆಲಸ ಮಾಡಿದ ಬಳಿಕ ಸೋಪಿನಿಂದ ಕೈ ತೊಳೆಯುವ ಅಭ್ಯಾಸ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಪ್ರತಿ ವರ್ಷ ಫೆಬ್ರವರಿ 10 ಮತ್ತು ಆಗಸ್ಟ್ 10 ರಂದು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಆಲ್ಬೆಂಡಜೋಲ್ ಮಾತ್ರೆ ನೀಡಲಾಗುತ್ತದೆ. ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಿದರೆ ಆರೋಗ್ಯ ವೃದ್ಧಿಯಾಗುತ್ತದೆ. ಈ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಕಾಲೇಜಿನ 100 ವಿದ್ಯಾರ್ಥಿಗಳಿಗೆ ಹಾಗೂ ಪೂರ್ವ ಪ್ರಾಥಮಿಕ ಶಾಲೆಯ 86 ಮಕ್ಕಳಿಗೆ ಆಲ್ಬೆಂಡಜೋಲ್ ಮಾತ್ರೆಗಳನ್ನು ನುಂಗಿಸಲಾಯಿತು. ಇಂದು ಹಾಜರಾಗಲು ಸಾಧ್ಯವಾಗದ ಮಕ್ಕಳಿಗೆ ಆಗಸ್ಟ್ 17 ರಂದು ಮಾತ್ರೆ ನೀಡಲಾಗುವುದು ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ್, ಸಿರೀಶ್, ಲತಾಮಣಿ, ವಿದ್ಯಾ, ರಂಜಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಪಿ.ಹೆಚ್.ಸಿ.ಒ ಪವಿತ್ರ ಪಿ.ಬಿ., ಸಿ.ಹೆಚ್.ಒ ರಶ್ಮಿ, ಆಶಾ ಕಾರ್ಯಕರ್ತೆ ರೂಪ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

