
CHITRADURGA NEWS | 12 DECEMBER 2025
ಚಿತ್ರದುರ್ಗ: ರಾಜ್ಯದ ಯಾವ ಮೂಲೆಗೆ ಹೋದರು ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಕಂಡಾಗ ಮನಸ್ಸಿಗೆ ಖುಷಿಯೆನಿಸುತ್ತದೆ ಎಂದು ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಂಟಕವಾಗುತ್ತಿರುವ ಟ್ರಾನ್ಸ್‌ಫಾರ್ಮರ್ | ಸ್ಥಳಾಂತರಿಸುವಂತೆ ಮನವಿ
ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಮದರ್ ಥೆರೇಸಾ ಸ್ಕೂಲ್ ಆಫ್ ನರ್ಸಿಂಗ್‍ನ ತೃತಿಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನರ್ಸಿಂಗ್ ತರಬೇತಿ ಮುಗಿಸಿದ ಮೇಲೆ ಯಾವ ಕ್ಲಿನಿಕ್ ಹೋದರೂ ನಿಮಗೆ ಉದ್ಯೋಗದ ಅವಕಾಶ ಸಿಗುತ್ತದೆ. ವಿದ್ಯೆದಾನ ಮಾಡಿದರೆ ಜೀವನ ಸಾರ್ಥಕವಾಗುತ್ತದೆಂಬುದು ಡಿ.ಬೋರಪ್ಪನವರ ಕನಸಾಗಿತ್ತು. ಅಧಿಕಾರ ಎಂದರೆ ಜವಾಬ್ದಾರಿ ಎನ್ನುವುದನ್ನು ಅರಿತು ಅವರ ಆದರ್ಶದಂತೆ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇನೆ. ಶಿಕ್ಷಣ ಎಲ್ಲರಿಗೂ ಸಿಗಬೇಕು.
ಪ್ರತಿ ವಿದ್ಯಾರ್ಥಿಯ ಜೀವನದಲ್ಲಿಯೂ ಸ್ವಾಗತ, ಬೀಳ್ಕೊಡುಗೆ ಸಮಾರಂಭ ಎದುರಾಗುತ್ತದೆ. ಹಿಂದುಳಿದ ವರ್ಗದ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಮ್ಮ ಸಂಸ್ಥೆ ಸದಾ ಬಾಗಿಲು ತೆರೆದಿರುತ್ತದೆ. ನೀವುಗಳು ಉದ್ಯೋಗದಲ್ಲಿ ಕೀರ್ತಿ ಗಳಿಸಿ ಮದಕರಿನಾಯಕ ವಿದ್ಯಾಸಂಸ್ಥೆಗೆ ಗೌರವ ತನ್ನಿ ಎಂದು ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಎಸ್.ಸಂದೀಪ್ ಮನವಿ ಮಾಡಿದರು.
ಇದನ್ನೂ ಓದಿ: ರೈತರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ | ಕೃಷಿ ಅಧಿಕಾರಿಗಳಿಗೆ ಡಿಸಿ ಸೂಚನೆ
ಮದರ್ ಥೆರೇಸಾ ಸ್ಕೂಲ್ ಆಫ್ ನರ್ಸಿಂಗ್‍ನ ಹಿರಿಯ ಉಪನ್ಯಾಸಕ ವಿ.ಎಸ್.ಪೋತದಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಮಯ ಅತ್ಯಮೂಲ್ಯವಾದುದು. ವ್ಯರ್ಥ ಮಾಡಬೇಡಿ. ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಯಾವುದೇ ತಾರತಮ್ಯವಿಲ್ಲದೆ ರೋಗಿಗಳ ಆರೈಕೆ ಮಾಡಿ. ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದುದು. ಪರಿಶ್ರಮದಿಂದ ಓದಿ ಹೆಚ್ಚಿನ ಅಂಕಗಳನ್ನು ಪಡೆದು ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ. ಶಿಕ್ಷಣ ಪಡೆದ ಸಂಸ್ಥೆಯನ್ನು ಎಂದಿಗೂ ಮೆರಯಬೇಡಿ ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮದರ್ ಥೆರೇಸಾ ಸ್ಕೂಲ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲರಾದ ಆರ್.ಮಂಜುಳ ಮಠ ಮಾತನಾಡಿದರು.
ಮದರ್ ಥೆರೇಸಾ ಸ್ಕೂಲ್ ಆಫ್ ನರ್ಸಿಂಗ್‍ನ ಉಪನ್ಯಾಸಕರುಗಳಾದ ವಿದ್ಯಾ, ಶಮ್ಷದ್‍ಭಾನು, ಕೆ.ಪೂಜಾ ವೇದಿಕೆಯಲ್ಲಿದ್ದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 12 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಸೈಕಿಯಾಟ್ರಿಸ್ಟ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
