CHITRADURGA NEWS | 26 MAY 2024
ಚಿತ್ರದುರ್ಗ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಮೂಡಿಗೆರೆ ಬಳಿ ಭೀಕರ ಅಪಘಾತದಲ್ಲಿ ಮಡಿದವರಿಗೆ ಪರಿಹಾರದ ಭರವಸೆ | ಸಚಿವ ಡಿ.ಸುಧಾಕರ್
ನಗರದ ಸ್ಟೇಡಿಯಂ ರಸ್ತೆಯ ಸರ್ಕಾರಿ ಮಹಿಳಾ ತರಬೇತಿ ಸಂಸ್ಥೆಗೆ ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಮತ್ತು ಅರ್ಹ ಆಸಕ್ತ ಅಭ್ಯರ್ಥಿಗಳು www.cite.karnataka.gov.in ತಂತ್ರಾಂಶದ ಮೂಲಕ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ಈ ಸಂಸ್ಥೆಯು ಮಹಿಳಾ ಸಂಸ್ಥೆಯಾಗಿರುವುದರಿಂದ ಎಲ್ಲಾ ಸೀಟುಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ. ಮಹಿಳೆಯರಿಗೆ ಹಂಚಿಕೆಯಾಗದೆ ಉಳಿದ ಸೀಟುಗಳನ್ನು ಪುರುಷರಿಗೆ ಹಂಚಿಕೆ ಮಾಡಲಾಗುತ್ತದೆ. ಆದ್ದರಿಂದ ಮಹಿಳೆಯರು ಈ ಅವಕಾಶವನ್ನು ಸದುಉಪಯೋಗ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಶಿಕ್ಷಣ ಕ್ಷೇತ್ರ ಕಲುಷಿತ | ಬಿ.ವೈ.ವಿಜಯೇಂದ್ರ ವಾಗ್ದಾಳಿ
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ 08194-234515 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
