
CHITRADURGA NEWS | 11 SEPTEMBER 2025
ಚಿತ್ರದುರ್ಗ: ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ, ವಿರೋಧ ಪಕ್ಷಗಳು ದಿವಾಳಿ ಆಗಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದರು.
ಇದನ್ನೂ ಓದಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ವಿವಿಧ ಕೋರ್ಸ್ ಗೆ ಅರ್ಜಿ ಅಹ್ವಾನ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು. ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಖಾತೆಗೆ ನೇರವಾಗಿ ಹಾಕಿದೆ. ಇಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ.
ವಿರೋಧ ಪಕ್ಷಗಳು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಅವರ ಹೀನಾಯ ಸ್ಥಿತಿಗೆ ಸಾಕ್ಷಿ ಎಂದರು.
ವಿರೋಧ ಪಕ್ಷಗಳು ಶೇ.5ರಷ್ಟು ಕೆಲಸ ಮಾಡಿ ಶೇ.95ರಷ್ಟು ಪ್ರಚಾರ ಪಡೆದುಕೊಳ್ಳುತ್ತವೆ. ಆದರೆ, ಕಾಂಗ್ರೆಸ್ ಶೇ.95ರಷ್ಟು ಕೆಲಸ ಮಾಡಿದರೂ ಶೇ.5ರಷ್ಟು ಮಾತ್ರ ಪ್ರಚಾರ ಪಡೆಯುತ್ತದೆ. ಹಾಗಾಗಿ, ಚುನಾವಣಾ ಸಮಯದಲ್ಲಿ ಮಾತ್ರವೇ ಪ್ರಚಾರ ಸಮಿತಿ ಕಾರ್ಯನಿರ್ವಹಿಸದೆ ವರ್ಷದ ಎಲ್ಲಾ ದಿನಗಳೂ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ: ಅರಣ್ಯ ಹುತಾತ್ಮರ ದಿನಾಚರಣೆ | ಹಸಿರು ಯೋಧರು ಕೂಡ ನಮ್ಮ ರಕ್ಷಕರು | ನ್ಯಾ.ರೋಣ ವಾಸುದೇವ್
ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ನೀಡಲಾಗುವ ಹಣದಿಂದ ಅವರ ಖರೀದಿ ಸಾಮಥ್ರ್ಯ ಹೆಚ್ಚಾಗಿದೆ. ಕೇವಲ ರಸ್ತೆ ಮಾಡುವುದು, ಕಟ್ಟಡ ಕಟ್ಟುವುದು ಮಾತ್ರವೇ ಅಭಿವೃದ್ಧಿ ಅಲ್ಲ. ಜನರಿಗೆ ಆರ್ಥಿಕ ಶಕ್ತಿ ತುಂಬುವುದೂ ಸಹ ಒಂದು ಬಗೆಯ ಅಭಿವೃದ್ಧಿ ಎಂಬುದನ್ನು ಪ್ರತಿ ಮತದಾರರಿಗೂ ತಿಳಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸಂವಿಧಾನದ ತತ್ವವನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆಯಿಟ್ಟು ಕಾರ್ಯನಿರ್ವಹಿಸುತ್ತಿದೆ. ಹಿಂದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ರಚನೆಯಾಗುತ್ತಿದ್ದ ಪ್ರಚಾರ ಸಮಿತಿಯನ್ನು ಎಐಸಿಸಿಯು ಪಕ್ಷದ ಸಂಘಟನೆ, ಬಲವರ್ಧನೆಗಾಗಿ ಶಾಶ್ವತವಾಗಿ ರಚನೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ ಎಂದರು.
ಈ ಪ್ರಚಾರ ಸಮಿತಿಯನ್ನು ಪ್ರತಿ ಬೂತ್ ಮಟ್ಟದಿಂದಲೂ ಇಬ್ಬರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಏಳಿಗೆಗಾಗಿ ಶ್ರಮಿಸಲಾಗುವುದು. ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಬೇಕು.
ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ
ಪ್ರಚಾರ ಸಮಿತಿ ಜೊತೆಗೆ ಪಕ್ಷದ ಪದಾಧಿಕಾರಿಗಳು ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಚುನಾವಣಾ ಸಮಯದಲ್ಲಿ ಮಾತ್ರವೇ ಪ್ರಚಾರ ಸಮಿತಿ ಕಾರ್ಯ ನಿರ್ವಹಿಸದೇ ವರ್ಷದ ಎಲ್ಲಾ ದಿನಗಳಲ್ಲೂ ಕಾರ್ಯ ನಿರ್ವಹಿಸಬೇಕಿದೆ.
ರಾಜ್ಯದಲ್ಲಿ 59 ಸಾವಿರ ಬೂತ್‍ಗಳಿದ್ದು, ಈ ಪ್ರಚಾರ ಸಮಿತಿಗೆ ಪ್ರತಿ ಬೂತ್ ಮಟ್ಟದಿಂದಲೂ ಇಬ್ಬರಂತೆ ಒಂದು ಲಕ್ಷಕ್ಕೂ ಅಧಿಕ ಜನರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಅಭಿವೃದ್ಧಿಗೆ ಶ್ರಮಿಸಲಾಗುವುದು.
ರಾಜ್ಯ ಸರ್ಕಾರದ 4 ಲಕ್ಷದ 9 ಸಾವಿರ ಕೋಟಿ ರೂ.ಬಜೆಟ್‍ನಲ್ಲಿ ಒಂದು ಲಕ್ಷ ಕೋಟಿ ರೂ. ಗಳನ್ನು ಜನರ ಖಾತೆಗೆ ಹಾಕುತ್ತಿದ್ದಾರೆ. 58 ಸಾವಿರ ಕೋಟಿ ರೂ. ಗ್ಯಾರಂಟಿ, 118 ಸಾವಿರ ಕೋಟಿ ರೂ. ವಿದ್ಯುತ್ ಉಚಿತ ನೀಡಿಕೆ, ಸರ್ಕಾರ ದಿವಾಳಿಯಾಗಿದ್ದರೆ ಒಂದು ಲಕ್ಷ ಕೋಟಿ ರೂ.ಗಳನ್ನು ಜನರ ಖಾತೆ ಹಾಕಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸಿದ ಅವರು, ಯಾವುದೇ ಭ್ರಷ್ಟಾಚಾರವಿಲ್ಲ. ಸರ್ಕಾರಿ ನೌಕರರ ಏಳನೇ ವೇತನಕ್ಕೆ 23 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಜಲಜನಾಯ್ಕ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾಜ್ ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಉಪಾಧ್ಯಕ್ಷರಾದ ಕುಮಾರ ಗೌಡ, ಚಿತ್ರದುರ್ಗ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ನಂದಿನಿಗೌಡ ಸೇರಿದಂತೆ ಕಾರ್ಯಕರ್ತರು, ಪದಾಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
