
CHITRADURGA NEWS | 06 FEBRUARY 2026
ಚಿತ್ರದುರ್ಗ: ಜಿಲ್ಲೆಯಲ್ಲಿ ಈವರೆಗೆ 23 ಕ್ಯಾನ್ಸರ್ ರೋಗಿಗಳಿಗೆ 68 ಕೀಮೋಥೆರಪಿ ಸೈಕಲ್‌ಗಳನ್ನು ಯಶಸ್ವಿಯಾಗಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 06 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಕರ್ನಾಟಕ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕ್ಯಾನ್ಸರ್ ರೋಗ ಪತ್ತೆ, ತಡೆಗಟ್ಟಲು ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಕುರಿತಂತೆ ಸಂಸದ ಗೋವಿಂದ ಕಾರಜೋಳ ಕೇಳಿದ್ದ ಪ್ರಶ್ನೆಗೆ ವಿವರಗಳನ್ನು ನೀಡಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಎನ್‌ಸಿಡಿ ಕ್ಲಿನಿಕ್ ಹಾಗೂ ಡೇ ಕೇರ್ ಕ್ಯಾನ್ಸರ್ ರೋಗ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯೇ ಫಾಲೋ-ಅಪ್ ಕೀಮೋಥೆರಪಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದುವರೆಗೆ 23 ರೋಗಿಗಳಿಗೆ 68 ಕೀಮೋಥೆರಪಿ ಸೈಕಲ್‌ಗಳನ್ನು ಯಶಸ್ವಿಯಾಗಿ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ. ರಾಷ್ಟ್ರೀಯ ಅಸಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ 30 ವರ್ಷ ಮೇಲ್ಪಟ್ಟ ನಾಗರಿಕರಿಗೆ ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ರೋಗಗಳ ತಪಾಸಣೆಯನ್ನು ವ್ಯಾಪಕವಾಗಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡದ ಅಗತ್ಯ | ಆಸಕ್ತ ಕಟ್ಟಡ ಮಾಲೀಕರು ಅರ್ಜಿ ಸಲ್ಲಿಸಿ
ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಕ್ಯಾನ್ಸರ್ ರೋಗ ತಪಾಸಣೆ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಇದರಿಂದ ಕ್ಯಾನ್ಸರ್ ರೋಗವನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಾಧ್ಯವಾಗಿದ್ದು, ಯಶಸ್ವಿ ಚಿಕಿತ್ಸೆಗೆ ಇದು ಅತ್ಯಂತ ಪ್ರಮುಖವಾಗಿದೆ.
ಕ್ಯಾನ್ಸರ್ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಕ್ರಮಗಳು:
ದೇಶಾದ್ಯಂತ 770 ಜಿಲ್ಲಾ ಎನ್‌ಸಿಡಿ ಕ್ಲಿನಿಕ್‌ಗಳ ಸ್ಥಾಪನೆ ಮಾಡಲಾಗಿದೆ. 364 ಜಿಲ್ಲಾ ಡೇ ಕೇರ್ ಕ್ಯಾನ್ಸರ್ ರೋಗ ಕೇಂದ್ರಗಳ ಕಾರ್ಯಾರಂಭ ಮಾಡಿದ್ದು, 2025-26ನೇ ಸಾಲಿಗೆ 297 ಹೊಸ ಡೇ ಕೇರ್ ಕ್ಯಾನ್ಸರ್ ರೋಗ ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ.
ಕರ್ನಾಟಕದಲ್ಲಿ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ರಾಜ್ ಮಟ್ಟದ ಕ್ಯಾನ್ಸರ್ ರೋಗ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ಮಹಿಳಾ ಸರ್ಕಾರಿ ನೌಕರರ ಸಂಘಟನೆ | ರಾಜ್ಯಾದ್ಯಂತ ವಿಸ್ತರಣೆ | ರೋಶಿನಿ ಗೌಡ
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ತೃತೀಯ ಹಂತದ ಕ್ಯಾನ್ಸರ್ ರೋಗ ಕೇಂದ್ರವಾಗಿದೆ. ಜೊತೆಗೆ 16 ಜಿಲ್ಲಾ ಡೇ ಕೇರ್ ಕ್ಯಾನ್ಸರ್ ರೋಗ ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಗಳಲ್ಲಿ ಆಂಕಾಲಜಿಸ್ಟ್‌ಗಳ ಕೊರತೆ ಇರುವುದನ್ನು ಗಮನಿಸಿ, ಸಮಸ್ಯೆ ನಿವಾರಣೆಗೆ ತೃತೀಯ ಹಂತದ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡು, ಜಿಲ್ಲಾ ಮಟ್ಟದಲ್ಲೇ ಚಿಕಿತ್ಸೆ ಮುಂದುವರೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಉತ್ತರಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
