
CHITRADURGA NEWS | 14 JUNE 2024
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ, ಪರೋಕ್ಷ ಭಾಗಿಯಾದ ಆರೋಪಿಗಳೆಲ್ಲರೂ ಒಬ್ಬೊಬ್ಬರಾಗಿ ಪೊಲೀಸರಿಗೆ ಶರಣಾಗುತ್ತಿದ್ದಾರೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆದೊಯ್ದ ನಟ ದರ್ಶನ್ ಅಭಿಮಾನಿ ಬಳಗದಲ್ಲಿ ನಾಲ್ವರಲ್ಲಿ ಮೊದಲು ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಬೆಂಗಳೂರಿನಲ್ಲೇ ಅರೆಸ್ಟ್ ಆಗಿದ್ದಾರೆ.
ಇದನ್ನೂ ಓದಿ: ರೇಣುಕಸ್ವಾಮಿ ಕೊಲೆ ಕೇಸ್ | ತಡರಾತ್ರಿ ನಡೆಯಿತು ಸ್ಥಳ ಮಹಜರು
ಜೂ.13 ಗುರುವಾರ ಚಿತ್ರದುರ್ಗದಿಂದ ಕಾರು ಚಾಲನೆ ಮಾಡಿಕೊಂಡು ಹೋಗಿದ್ದ ರವಿಶಂಕರ್ ಡಿವೈಎಸ್‍ಪಿ ಕಚೇರಿಗೆ ಶರಣಾಗಿದ್ದ. ಇಂದು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಚಿತ್ರದುರ್ಗದ ಆಟೋ ಚಾಲಕರಾದ ಜಗ್ಗು ಹಾಗೂ ಅನು(ಅನಿಲ್‍ಕುಮಾರ್) ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಭಾಗಿಯಾಗಿದ್ದ ಚಿತ್ರದುರ್ಗದ ಎಲ್ಲ ಆರೋಪಿಗಳು ಪೊಲೀಸ್ ಬಲೆಗೆ ಸಿಕ್ಕಿದ್ದಾರೆ.
ಇದನ್ನೂ ಓದಿ: ಗಾಳಿಯಲ್ಲಿ ಹಾರಿಹೋದ ಬಸ್ ಟಿಕೆಟ್ | ನಡು ರಸ್ತೆಯಲ್ಲೇ ಮಹಿಳೆಯನ್ನು ಇಳಿಸಿದ ನಿರ್ವಾಹಕ
ಡಿವೈಎಸ್‍ಪಿ ದಿನಕರ್ ಸಮುಖದಲ್ಲಿ ಇಬ್ಬರು ಶರಣಾಗಿದ್ದು, ದೂರು ದಾಖಲಾಗಿರುವ ಬೆಂಗಳೂರು ಠಾಣೆಗೆ ಇಬ್ಬರನ್ನು ಕರೆದೊಯ್ಯಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
