
CHITRADURGA NEWS | 25 JANUARY 2025
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆ ಬಳಿ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದ 25 ಜನ ಆರೋಪಿಗಳಿಗೆ ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ತಿಂಗಳು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018 ಏಪ್ರಿಲ್ 30 ರಂದು ಸಂಜೆ ಹಿರಿಯೂರಿನಿಂದ ಜಿಲ್ಲಾ ಆಸ್ಪತ್ರೆಗೆ ಆಗಮಿಸಿದ್ದ ಸುಮಾರು 25 ಮಂದಿ, ಬಾಲಕಿಯೊಬ್ಬರಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ರಾತ್ರಿ ವೇಳೆ ಗಲಾಟೆ ಮಾಡಿದ್ದರು.

ಇದನ್ನೂ ಓದಿ:ADC ಕುಮಾರಸ್ವಾಮಿ, ಶಿಕ್ಷಕಿ ಅಂಬಿಕಾ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ
ಕೈಯಲ್ಲಿ ಕಲ್ಲು ಹಿಡಿದುಕೊಂಡು ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪೊಲೀಸರು ಇದು ಆಸ್ಪತ್ರೆ ಇಲ್ಲಿ ಯಾರೂ ಗಲಾಟೆ ಮಾಡಬಾರದು ಎಂದು ಹೊರಗೆ ಕಳಿಸಿದ್ದರು. ಆಸ್ಪತ್ರೆ ಗೇಟ್‌ನಿಂದ ಹೊರಬಂದು ತುರ್ತು ಚಿಕಿತ್ಸೆಗಾಗಿ ಬರುತ್ತಿದ್ದ ಆಂಬುಲೆನ್ಸ್ ಗೆ ಕಲ್ಲು ತೂರಿ ನಷ್ಟ ಉಂಟು ಮಾಡಿ, ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿದ್ದರು.
ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್‌ಐ ಯಶೋಧಮ್ಮ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ತನಿಖೆ ಪೂರೈಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭ | ಸಂಸದ ಗೋವಿಂದ ಕಾರಜೋಳ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರೋಣ ವಾಸುದೇವ ಅವರು 25 ಆರೋಪಿಗಳಿಗೆ 2 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ತಲಾ 7 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಮಲ್ಲಯ್ಯ ವಾದ ಮಂಡಿಸಿದ್ದರು.
ಪ್ರಕರಣವನ್ನು ಉತ್ತಮ ರೀತಿಯಲ್ಲಿ ತನಿಖೆ ಮಾಡಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕಾರ್ಯನಿರ್ವಹಿಸಿದ ಚಿತ್ರದುರ್ಗ ನಗರ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಕೋರ್ಟ್ ಮಾನಿಟರಿಂಗ್ ವಿಭಾಗದವರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
