Connect with us

ಚೆಕ್‍ಬೌನ್ಸ್ ಕೇಸ್ | ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಹೊಳಲ್ಕೆರೆಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ

ಕ್ರೈಂ ಸುದ್ದಿ

ಚೆಕ್‍ಬೌನ್ಸ್ ಕೇಸ್ | ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

CHITRADURGA NEWS | 06 FEBRUARY 2024

ಚಿತ್ರದುರ್ಗ: ಚೆಕ್ ಬೌನ್ಸ್ ಪ್ರಕರಣದಲ್ಲಿ ಹೊಳಲ್ಕೆರೆ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ(ವಿಎ)ಗೆ ಹೊಳಲ್ಕೆರೆಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಇದನ್ನೂ ಓದಿ: ಭದ್ರೆಗಾಗಿ ಬೀದಿಗಿಳಿದ ಹಸಿರು ಪಡೆ

ಗ್ರಾಮ ಲೆಕ್ಕಾಧಿಕಾರಿ ಬಿ.ಎಂ.ಆರ್.ತೇಜಸ್ವಿ ಶಿಕ್ಷೆಗೆ ಒಳಗಾದವರು. ಚೆಕ್ ಬೌನ್ಸ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಹಾಗೂ 4.40 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಎ.ಸಿದ್ದೇಶ್ ಎನ್ನುವವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ | ಅಡಿಕೆಯ ಸುಧಾರಿತ ಬೇಸಾಯ ಕುರಿತ ತರಬೇಗೆ ಅರ್ಜಿ ಆಹ್ವಾನ

ಸಿದ್ದೇಶ್ ಪರವಾಗಿ ನ್ಯಾಯವಾದಿ ಆರ್.ಹನುಮಂತಪ್ಪ ವಾದ ಮಂಡಿಸಿದ್ದರು.

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
Exit mobile version