
CHITRADURGA NEWS | 30 MAY 2024
ಚಿತ್ರದುರ್ಗ: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಸಮುದ್ರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಿದ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅವರು ಗುರುವಾರ ಪರಿಶೀಲಿಸಿದರು.
ಕ್ಲಿಕ್ ಮಾಡಿ ಓದಿ: ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹರಿಸಲು ಶ್ರೀನಿವಾಸ್ ಸಮರ್ಥರು | ಡಾ.ಪ್ರಭಾ ಮಲ್ಲಿಕಾರ್ಜುನ್

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ನಳ ಸಂಪರ್ಕ ಕಲ್ಪಿಸಿರುವುದನ್ನು ಪರಿಶೀಲಿಸಿದರು.
ನಂತರ ಗ್ರಾಮಸ್ಥರರೊಂದಿಗೆ ಚರ್ಚಿಸಿದಾಗ ಗ್ರಾಮಸ್ಥರು ಜಲಜೀವನ್ ಮಿಷನ್ ಯೋಜನೆಯಿಂದ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿರುವುದರಿಂದ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಮುರುಘಾಮಠದಿಂದ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ | ಸಂಸ್ಥೆ ಮುಖ್ಯಸ್ಥರಿಗೆ ಸಸಿಗಳ ಪೋಷಣೆ ಹೊಣೆ
ಈ ಸಂದರ್ಭದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಹರೀಶ್ ಚಂದ್, ತಾ.ಪಂ.ಇಒ ಪ್ರಕಾಶ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್.ನಾಡರ್, ಎಸ್‍ಬಿಎಂ-ಜಿ ಯೋಜನೆಯ ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
