
CHITRADURGA NEWS | 20 JANUARY 2026
ಚಿತ್ರದುರ್ಗ: ಸರ್ಕಾರ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಬೇಕು ಎನ್ನುವ ಸದುದ್ದೇಶದೊಂದಿಗೆ ಜಾರಿಗೊಳಿಸಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ, ಪರಿಶೀಲಿಸಲು ಕಳೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದರು.
ಇದನ್ನೂ ಓದಿ: ಕೋವಿಡ್ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ

ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತಹಸಿಲ್ದಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರೆ ಓರ್ವ ಇಂಜಿನಿಯರ್ ಅವರ ನೇತೃತ್ವದಲ್ಲಿ ಜೆಜೆಎಂ ಯೋಜನೆ ಕಾಮಗಾರಿಗಳ ಒಟ್ಟು 490 ಕಾಮಗಾರಿಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಈ ಪೈಕಿ 300 ಕ್ಕೂ ಹೆಚ್ಚು ಕಾಮಗಾರಿಗಳು ಕಳಪೆ ಎಂಬುದಾಗಿ ವರದಿ ಬಂದಿದೆ.
ಕೆಲವೆಡೆ ಪೂರೈಕೆ ಮಾಡುವ ನೀರಿನ ಗುಣಮಟ್ಟ ಕಳಪೆಯಾಗಿದ್ದರೆ, ಕೆಲವೆಡೆ ಕಾಮಗಾರಿಯ ಗುಣಮಟ್ಟವೇ ಕಳಪೆಯಾಗಿದೆ, ಇನ್ನು ಹಲವೆಡೆ ಜೆಜೆಎಂ ಕಾಮಗಾರಿಗಾಗಿ ರಸ್ತೆಗಳನ್ನು ಅಗೆದಿದ್ದು, ಅದನ್ನು ಸಮರ್ಪಕವಾಗಿ ಮುಚ್ಚದೆ ಉತ್ತಮ ರಸ್ತೆಯನ್ನು ಹಾಳುಗೆಡವಿರುವುದು ಕಂಡುಬಂದಿದೆ.
14 ಗುತ್ತಿಗೆದಾರರು ಕೈಗೊಂಡಿರುವ ಕಾಮಗಾರಿಗಳು ಕಳಪೆಯಾಗಿದೆ ಎಂಬುದಾಗಿ ಅಧಿಕಾರಿಗಳ ತಂಡ ವರದಿ ಸಲ್ಲಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಹೇಳಿದರು.
ಇದನ್ನೂ ಓದಿ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ | ಸಚಿವ ಡಿ.ಸುಧಾಕರ್, ಶಾಸಕರು ಭಾಗೀ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು, ಜೆಜೆಎಂ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುಣಮಟ್ಟ ನಿಯಂತ್ರಣ ಕೋಶದಿಂದ ಕಾಮಗಾರಿಯ ಎಂ.ಬಿ. ಪರಿಶೀಲನಾ ವರದಿ ಪಡೆಯಬೇಕು. ಗುತ್ತಿಗೆದಾರರಿಗೆ ದಂಡ ವಿಧಿಸುವುದಲ್ಲದೆ, ಕಾಮಗಾರಿಯನ್ನು ಸರಿಪಡಿಸಿ ಕೊಡುವಂತೆ ತಿಳಿಸಲು ಅವಕಾಶವಿದೆ. ತಾಂತ್ರಿಕ ಸಮಿತಿಯನ್ನು ರಚಿಸಿ, ಇನ್ನೊಮ್ಮೆ ಪರಿಶೀಲನೆಗೆ ಒಳಪಡಿಸಬಹುದು ಎಂದು ಸಲಹೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
