ಮುಖ್ಯ ಸುದ್ದಿ
ಇಂದು ಚಿತ್ರದುರ್ಗ ಬಂದ್ | ಯಾರೆಲ್ಲಾ ಬೆಂಬಲ ಸೂಚಿಸಿದ್ದಾರೆ

CHITRADURGA NEWS | 22 JANUARY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23 ಮಂಗಳವಾರ ಕರೆಕೊಟ್ಟಿರುವ ಚಿತ್ರದುರ್ಗ ನಗರ ಬಂದ್‍ಗೆ ಹಲವು ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ಸಮಿತಿಯ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಬಂದ್ ಪೂರ್ವಾ ಸಿದ್ದತಾ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಆಗಮಿಸಿ ಪೂರ್ಣ ಪ್ರಮಾಣದ ಬೆಂಬಲ ಘೋಷಿಸಿದರು.
ಇದನ್ನೂ ಓದಿ: ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ
ನಗರದ ಹಲವು ಖಾಸಗಿ ಶಾಲೆ, ಕಾಲೇಜುಗಳು ಈಗಾಗಲೇ ಬಂದ್ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿವೆ. ಸರ್ಕಾರಿ ಶಾಲೆಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಆಟೋ ಚಾಲಕರು, ಲಘು ವಾಹನ ಚಾಲಕರು, ಸಿನಿಮಾ ಮಂದಿರದ ಮಾಲೀಕರು ಗಾಮೆರ್ಂಟ್ಸ್, ವಾಹನ ಶೋ ರೂಂ, ಬಟ್ಟೆ ಅಂಗಡಿಗಳು, ಬಂಗಾರದ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಎಪಿಎಂಸಿ ವರ್ತಕರು ಹಮಾಲರು, ಕನ್ನಡ ಪರ ಸಂಘಟನೆಗಳು, ಕಟ್ಟಡ ಕಾರ್ಮಿಕ ಸಂಘಟನೆಗಳು, ಟೈಲ್ಸ್ ಮತ್ತು ಗ್ರಾನೈಟ್ ಸಂಘಟನೆ ಮುಖ್ಯಸ್ಥರು ಹಾಗು ಹೊಟೇಲ್ ಮಾಲೀಕರು ಸಭೆಗೆ ಆಗಮಿಸಿ ಸಭೆಗೆ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ: ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಈಗ ಒಟ್ಟು ಮತದಾರರೆಷ್ಟು
ಖಾಸಗಿ ಮತ್ತು ರಾಜ್ಯ ಸಾರಿಗೆ ಬಸ್‍ಗಳು ಊರೊಳಗೆ ಪ್ರವೇಶಿಸದೆ ಹೊರಗೆ ಸಂಚರಿಸುವುದಾಗಿ ಹೋರಾಟ ಸಮಿತಿ ಮುಖಂಡರಿಗೆ ಸ್ಪಷ್ಟಪಡಿಸಿದ್ದಾರೆ. ಏತನ್ಮಧ್ಯೆ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಮಾಜಿ ಸಚಿವ ಹೆಚ್.ಆಂಜನೇಯ, ಕೆಪಿಸಿಸಿ ಅಸಂಘಟಿತ ಕಾರ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಬಂದ್ ಕರೆ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿವರಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ, ದಯಾನಂದ್, ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ ಸೈಯದ್ ಅನ್ವರ್ ಭಾಷಾ, ಕರುನಾಡ ವಿಜಯಸೇನೆಯ ಕೆ.ಟಿ.ಶಿವಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ರಮೇಶ್, ಕಟ್ಟಡ ಕಾರ್ಮಿಕರ ಸಂಘದ ಕುಮಾರ್ ಮತ್ತಿತರರಿದ್ದರು.
