ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿ ಕುರುಮರಡಿಕೆರೆ ಗ್ರಾಮದಲ್ಲಿ ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಯಿಂದ ‘ಜನತಾ ದರ್ಶನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಲಂಚ ಕೇಳಿದರೆ ಪೋನ್ ಮಾಡಿ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಚಿತ್ರದುರ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಇಲ್ಲಾ ಇಲಾಖೆ ಅಧಿಕಾರಿ ವರ್ಗದವರು ಹಾಜರಿರುತ್ತಾರೆ.
ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

