CHITRADURGA NEWS | 23 OCTOBER 2026
ಚಿತ್ರದುರ್ಗ: ಜಂಗಿ ಕುಸ್ತಿ ಪಂದ್ಯಾವಳಿಯಲ್ಲಿ ಮಹಾರಾಷ್ಟ್ರದ ಪುಣೆ ನಗರದ ದಾನ್ ಜಿ ಕೋಳಿ ಪ್ರಥಮ ಸ್ಥಾನ ಪಡೆದು, ₹40 ಸಾವಿರ ನಗದು ಬಹುಮಾನದೊಂದಿಗೆ ಚಿನ್ಮೂಲಾದ್ರಿ ಕೇಸರಿ ಬಿರುದಿಗೆ ಭಾಜನರಾದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಪಂದ್ಯಾವಳಿಯಲ್ಲಿ ವಿಜಯಪುರದ ರಾಮಚಂದ್ರ ದ್ವಿತೀಯ ಸ್ಥಾನ ಪಡೆದು ₹30 ಸಾವಿರ ನಗದು ಬಹುಮಾನ ಗಳಿಸಿದರೆ, ಮಹಾರಾಷ್ಟ್ರದ ಕೊಲ್ಲಾಪುರದ ಸುಹಿಲ್ ಶೇಖ್ ತೃತೀಯ ಸ್ಥಾನ ಪಡೆದು ₹20 ಸಾವಿರ ನಗದು ಬಹುಮಾನ ಪಡೆದರು.
ಎಸ್.ಜೆ.ಎಂ. ಕಾನೂನು ಕಾಲೇಜಿನ ಪ್ರಾಚಾರ್ಯ ವಿಶ್ವನಾಥ್ ಅವರು ವಿಜೇತ ಕುಸ್ತಿಪಟುಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಇದನ್ನೂ ಓದಿ: ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
ಈ ಜಂಗಿ ಕುಸ್ತಿ ಪಂದ್ಯಾವಳಿಯಲ್ಲಿ 14 ಮಹಿಳಾ ಕುಸ್ತಿಪಟುಗಳು ಹಾಗೂ 136 ಪುರುಷ ಕುಸ್ತಿಪಟುಗಳು ಸೇರಿದಂತೆ ಒಟ್ಟು 150 ಕುಸ್ತಿಪಟುಗಳು ಭಾಗವಹಿಸಿದ್ದರು. ಪಂದ್ಯಾವಳಿಯಲ್ಲಿ ಒಟ್ಟಾರೆ ₹4 ಲಕ್ಷಕ್ಕೂ ಅಧಿಕ ಮೊತ್ತವನ್ನು ಕುಸ್ತಿಪಟುಗಳಿಗೆ ನಗದು ಬಹುಮಾನವಾಗಿ ವಿತರಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

