CHITRADURGA NEWS | 19 NOVEMBER
ಚಿತ್ರದುರ್ಗ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಉದಯವಾಗಿ 25 ವರ್ಷ ಸಂದಿದೆ ಹಿನ್ನಲೆಯಲ್ಲಿ ನ.22 ರಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯ್ಯಣ್ಣ ಹೇಳಿದರು.
ಇದನ್ನೂ ಓದಿ: ಅಡಿಕೆ ರೇಟ್ | ನವೆಂಬರ್ 18 | ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದುಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪ್ರಾದೇಶಿಕ ಪಕ್ಷ 25 ವರ್ಷವನ್ನು ಆಚರಣೆ ಮಾಡುವುದು ಅದು ಸುಲಭದ ಮಾತಲ್ಲ. ರಾಷ್ಟ್ರೀಯ ಪಕ್ಷ ನಡುವೆ ಹೊರಾಟವನ್ನು ಮಾಡುವುದರ ಮೂಲಕ ಚುನಾವಣೆಯಲ್ಲಿ ಅವರನ್ನು ಎದುರಿಸಲಾಗಿದೆ.
ಹಲವಾರು ಪ್ರಾದೇಶಿಕ ಪಕ್ಷಗಳು ಪ್ರಾರಂಭವಾಗಿ ನೆಲ ಕಚ್ಚಿವೆ. ಅಂತಹದರಲ್ಲಿ ಜೆಡಿಎಸ್ ಪಕ್ಷವನ್ನು ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ರಾಜ್ಯದಲ್ಲಿ ಸಂಘಟಿಸಿದ್ದಾರೆ.
ನ.22ರಂದು ಜೆ.ಪಿ ಭವನದಲ್ಲಿ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ. ಇದರಲ್ಲಿ ಭಾಗವಹಿಸುವುದರ ಮೂಲಕ ದೇವೇಗೌಡರಿಗೆ ಬಲವನ್ನು ತುಂಬಬೇಕಿದೆ. ಕೇಂದ್ರದ ಸಚಿವರಾಗಿ ಕುಮಾರಸ್ವಾಮಿಯವರು ಉತ್ತಮವಾದ ಕಾರ್ಯವನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಜೀವಂತವಾಗಿ ಇಡುವ ಕಾರ್ಯ ಮಾಡಿದ್ದಾರೆ. ಇವರಿಗೆ ನಾವೆಲ್ಲಾ ಸಾಥ್ ನೀಡಬೇಕು ಎಂದರು.
ಇದನ್ನೂ ಓದಿ: ನ.26ಕ್ಕೆ ಮುರುಘಾ ಶರಣರ ತೀರ್ಪು !
ಪಕ್ಷದಲ್ಲಿ ಮಂದಿನ ದಿನದಲ್ಲಿ ಚಟುವಟಿಕೆಗಳನ್ನು ಪ್ರಾರಂಭ ಮಾಡಬೇಕು. ಪಕ್ಷದ ಸದಸ್ಯತ್ವ, ಪದಾಧಿಕಾರಿಗಳು ಸೇರಿ ಸಂಘಟನೆ, ಇದ್ದಲ್ಲದೆ ಮುಂದಿನ ದಿನದಲ್ಲಿ ಬರುವಂತ ವಿವಿಧ ಚುನಾವಣೆಗಳಿಗೆ ತಯಾರಿ ಮಾಡಿಕೊಳ್ಳಬೇಕು.
ನಮ್ಮದು ಈಗ ಎನ್.ಡಿ.ಎ ಮೃತ್ರಿ ಕೂಟವಾಗಿದೆ, ಬಿಹಾರದಲ್ಲಿ ಅದಂತೆ 2028ರ ಚುನಾವಣೆಯಲ್ಲಿ ನಮ್ಮ ಮೈತ್ರಿ ಪಕ್ಷದ ಗೆಲುವು ಆಗಲಿದೆ ಎಂದು ಭವಿಷ್ಯ ನುಡಿದ ಅವರು, ಮುಂಬರುವ ಯಾವುದೇ ಚುನಾವಣೆ ಆದರೂ ಸಹಾ ಬಿಜೆಪಿ ಜೊತೆಯಲ್ಲಿ ಮೈತ್ರಿಯನ್ನು ಮಾಡಿಕೊಂಡು ಚುನಾವಣೆ ಎದುರಿಸಿ ಅಧಿಕಾರ ಹಿಡಿಯಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ಮುಖಂಡರುಗಳು ಸ್ವಯಂ ಆಗಿ ಭಾಗವಹಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 19 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಜೆಡಿಎಸ್ ಮುಖಂಡ ರವೀಂದ್ರ, ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ, ಮಂಜುನಾಥ್, ಗಣೇಶ್, ಪರಮಶ್ವರಪ್ಪ, ಹನುಮಂತಪ್ಪ, ವಿರೇಶ್, ತಿಪ್ಪೇಸ್ವಾಮಿ, ಮಂಜಣ್ಣ, ಶಂಕರ್, ವೀರಭದ್ರಪ್ಪ, ರಮೇಶ್ ಕುಮಾರ್, ಶೇಖರ್ ಮೂರ್ತಿ, ಚಿದಾನಂದ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
