
CHITRADURGA NEWS | 18 FEBRUARY 2026
ಚಿತ್ರದುರ್ಗ: ನಗರದ ಎಸ್.ಆರ್.ಎಸ್ ಪಿಯು ಕಾಲೇಜಿಗೆ 2026ರ ಜೆಇಇ ಮೇನ್ಸ್ ನಲ್ಲಿ ಐತಿಹಾಸಿಕ ಫಲಿತಾಂಶ ಲಭಿಸಿದೆ.
ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ಚಾಲನೆ | ಮೆರುಗು ನೀಡಿದ ಕಲಾ ತಂಡಗಳು | ಕನ್ನಡದ ಮನಸ್ಸುಗಳು
ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜನವರಿಯಲ್ಲಿ ನಡೆದ ಜೆಇಇ ಮೇನ್ಸ್ ಮೊದಲ ಸ್ಲಾಟ್ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಗೆ ಅಗ್ರಸ್ಥಾನ ಪಡೆದಿದ್ದಾರೆ.
ಎಸ್.ಜಿ.ಮಿಥುನ್ ಶೇ. 99.54% ನೊಂದಿಗೆ ಹೊಸ ದಾಖಲೆ ನಿರ್ಮಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಕೆ.ಎಂ.ಸುದರ್ಶನ್ 98.61%, ಬಿ.ಕೀರ್ತನ್ 98.43% ನೊಂದಿಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ಕೆ.ಎಸ್.ಪ್ರಮೋದ್ ಹೆಬ್ಬಾಳ್ 98.11%, ಅಂಜಿನಿ ಕುಮಾರ್. 97.08% ಹಾಗೂ ಕಾಲೇಜಿನ ಒಟ್ಟು 27 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಪರ್ಸಂಟೇಜ್ ಪಡೆದುಕೊಂಡು ಐಐಟಿ ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ: ಬೇಸಿಗೆ ಆರಂಭ | ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಿ | ಡಿಸಿ ವೆಂಕಟೇಶ್ ಸೂಚನೆ
58 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಗೆ ಕ್ವಾಲಿಪೈ ಆಗುವುದರ ಮೂಲಕ ಐಐಟಿನಲ್ಲಿ ಸೀಟು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿಂನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

