By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    5 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    16 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    16 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    7 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    16 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    7 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    15 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    16 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: JJM ಕಳಪೆ ಕಾಮಗಾರಿ | ಬಿಲ್ ಪಾವತಿ ತಡೆಗೆ ಸಂಸದ ಗೋವಿಂದ ಕಾರಜೋಳ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

JJM ಕಳಪೆ ಕಾಮಗಾರಿ | ಬಿಲ್ ಪಾವತಿ ತಡೆಗೆ ಸಂಸದ ಗೋವಿಂದ ಕಾರಜೋಳ ಸೂಚನೆ

News Desk Chitradurga News
Last updated: 22 February 2026 09:31
News Desk Chitradurga News
8 months ago
Share
ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ (ದಿಶಾ) ಸಮಿತಿ ಸಭೆ
ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ (ದಿಶಾ) ಸಮಿತಿ ಸಭೆ
SHARE

CHITRADURGA NEWS | 22 FEBRUARY 2026

ಚಿತ್ರದುರ್ಗ: ಪ್ರಸಕ್ತ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಇರುವುದರಿಂದ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಸದ್ಬಳಕೆ ಮಾಡಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಈ 5 ಮನೆಯಲ್ಲಿ ತಯಾರಿಸಿದ ಪಾನೀಯಗಳು ನಿಮಿಷಗಳಲ್ಲಿ ಮಲಬದ್ಧತೆಯನ್ನು ನಿವಾರಿಸುತ್ತವೆಯಂತೆ

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಶೇ. 70ರಷ್ಟು ಜನರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಬಡವರಿದ್ದಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಈ ಬಡವರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯ. ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿಯಬಾರದು. 

ಪ್ರಸ್ತುತ ಜಿಲ್ಲೆಯು ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಕೊನೆಯ ಸ್ಥಾನಗಳಲ್ಲಿದೆ. ಶೈಕ್ಷಣಿಕ ಪ್ರಗತಿಯಲ್ಲಿ ಜಿಲ್ಲೆಯನ್ನು ಮೊದಲ 3-4 ಸ್ಥಾನಗಳಿಗೆ ತರಲು ಶಿಕ್ಷಣ ಇಲಾಖೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಬಡವರಿಗಾಗಿ ಮಂಜೂರಾದ ಮನೆಗಳನ್ನು ಶೀಘ್ರವಾಗಿ ನಿರ್ಮಿಸಿಕೊಳ್ಳಲು ಉತ್ತೇಜನ ನೀಡಬೇಕು. ಒಂದು ವೇಳೆ ಫಲಾನುಭವಿಗಳು ಆಸಕ್ತಿ ತೋರಿಸದಿದ್ದರೆ, ಅರ್ಹ ಮತ್ತು ಅಗತ್ಯವಿರುವ ಇತರ ಬಡ ಜನರಿಗೆ ಆ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು.

ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ:

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಧಾನಮಂತ್ರಿಗಳ ಆಶಯದಂತೆ ‘ಜಲಜೀವನ್ ಮಿಷನ್’ ಅಡಿಯಲ್ಲಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. 

ಇದನ್ನೂ ಓದಿ: ಆಹಾರ ಮೇಳ, ಉಚಿತ ಆರೋಗ್ಯ ತಪಾಸಣೆ ಶಿಬಿರ | ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟನೆ 

ಜಿಲ್ಲೆಯಲ್ಲಿ ನದಿಗಳ ಲಭ್ಯತೆ ಕಡಿಮೆ ಇರುವುದರಿಂದ ಮೇಲ್ಮೈ ನೀರು ಒದಗಿಸುವುದು ಸವಾಲಿನ ಕೆಲಸವಾಗಿದ್ದರೂ, ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ತಿಳಿಸಿದರು.

ಕೃಷಿ ಮತ್ತು ಪೂರಕ ಇಲಾಖೆಗಳಿಗೆ ಒತ್ತು:

ಕೇಂದ್ರ ಬಜೆಟ್‍ನಲ್ಲಿ ಕೃಷಿ ಮತ್ತು ಅದರ ಉಪ-ಕ್ಷೇತ್ರಗಳಾದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಮೀನುಗಾರಿಕೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಪ್ರಧಾನಮಂತ್ರಿಗಳು ಕೂಡ ಹೈನುಗಾರಿಕೆಗೆ ವಿಶೇಷ ಒತ್ತು ನೀಡುವಂತೆ ಕರೆ ನೀಡಿದ್ದಾರೆ.  

ಈ ಯೋಜನೆಗಳ ಲಾಭ ಜಿಲ್ಲೆಯ ರೈತರಿಗೆ ತಲುಪಿಸಲು ಕೃಷಿ, ತೋಟಗಾರಿಕೆ ಮತ್ತು ಪಶುಸಂಗೋಪನಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಪಶುಸಂಗೋಪನೆಗೆ ಅಗತ್ಯ ಇರುವ ಪ್ರಸ್ತಾವನೆಗಳನ್ನು ಸಲ್ಲಿಸಿದರೆ, ವೈಯಕ್ತಿಕವಾಗಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಅನುಮೋದನೆ ಕೊಡಿಸುವುದಾಗಿ ಸಂಸದ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.

ಜೆಜೆಎಂ ಕಳಪೆ ಕಾಮಗಾರಿ ಬಿಲ್ ಪಾವತಿ ತಡೆಹಿಡಿಯಲು ಸೂಚನೆ:

ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಕುಡಿಯುವ ನೀರಿನ ಕಾಮಗಾರಿಗಳು ಅತ್ಯಂತ ಕಳಪೆಯಾಗಿರುವ ಬಗ್ಗೆ ಸಂಸದ ಗೋವಿಂದ ಎಂ. ಕಾರಜೋಳ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರತಿದಿನ ಸ್ಕಿಪ್ಪಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದೇ? ತಿಳಿಯಿರಿ

ಜಿಲ್ಲಾ ಪಂಚಾಯತ್ ಸಿಇಓ ಡಾ. ಆಕಾಶ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯ ಒಟ್ಟು 1,500 ಜೆಜೆಎಂ ಕಾಮಗಾರಿಗಳ ಪೈಕಿ ಶೇ. 30ರಷ್ಟು ಅಂದರೆ ಸುಮಾರು 500 ಕಾಮಗಾರಿಗಳನ್ನು ತಾಲೂಕು ಮಟ್ಟದ ತಾಂತ್ರಿಕ ತಂಡದಿಂದ ತಪಾಸಣೆ ನಡೆಸಲಾಗಿದೆ. ವರದಿಯಲ್ಲಿ 160 ಕಾಮಗಾರಿಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿವೆ. ರಸ್ತೆ ಮರುನಿರ್ಮಾಣ, ಪೈಪ್‍ಗಳ ಗುಣಮಟ್ಟ ಮತ್ತು ನೀರಿನ ಒತ್ತಡದ ನಿರ್ವಹಣೆಯಲ್ಲಿ ಲೋಪಗಳು ಕಂಡುಬಂದಿವೆ ಎಂಬುದಾಗಿ ವರದಿ ಸಲ್ಲಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಕಳಪೆ ಕಾಮಗಾರಿಗೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಂಸದ ಗೋವಿಂದ ಎಂ ಕಾರಜೋಳ, ಕೇಂದ್ರ ಸರ್ಕಾರ ಯೋಜನೆಯಡಿ ಜಿಲ್ಲೆಗೆ ಎರಡು ಸಾವಿರಾರು ಕೋಟಿ ಅನುದಾನದ ನೀಡಿದೆ. ಕಳಪೆ ಕಾಮಗಾರಿಯಿಂದಾಗಿ ಸಾರ್ವಜನಿಕರ ಹಣ ಪೋಲಾಗುವುದನ್ನು ಸಹಿಸಲು ಆಗುವುದಿಲ್ಲ. ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ನೀಡಬೇಕಿದ್ದ ಬಿಲ್ ಪಾವತಿಯನ್ನು ತಕ್ಷಣವೇ ತಡೆ ಹಿಡಿಯಬೇಕು.

ಕಾಮಗಾರಿಗಳು ಪೂರ್ಣಗೊಂಡು, ಗುಣಮಟ್ಟದ ಪ್ರಮಾಣಪತ್ರ ದೊರೆಯುವವರೆಗೆ ಕೇಂದ್ರ ಸರ್ಕಾರ ಬಾಕಿ ಇರುವ ರೂ. 450 ಕೋಟಿ ಅನುದಾನ ನೀಡುವುದಿಲ್ಲ. ಇದರಿಂದ ಯೋಜನೆಗೆ ಅನುದಾನ ಕೊರತೆ ಉಂಟಾಗುತ್ತದೆ. ಕೂಡಲೇ ಲೋಪದೋಷ ಸರಿಪಡಿಸುವಂತೆ ಸೂಚಿಸಿದರು.

ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅನುದಾನ ಕೊಡಿಸಲು ಪ್ರಾಮಾಣಿಕ ಯತ್ನ | ಗೋವಿಂದ ಎಂ.ಕಾರಜೋಳ

ಜಲ ಜೀವನ್ ಮಿಷನ್ ಕಾಮಗಾರಿಗಳ ಬಗ್ಗೆ ಸಾಮಾನ್ಯ ವರದಿಯನ್ನು ಮಾತ್ರ ಪಡೆಯಲಾಗಿದೆ. ಇನ್ನು 15 ದಿನಗಳಲ್ಲಿ ಪೈಪ್ ಗುಣಮಟ್ಟ ಮತ್ತು ನೀರು ಪರೀಕ್ಷೆಯ ತಾಂತ್ರಿಕ ವರದಿ ಪಡೆಯಲಾಗುವುದು. ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಇಓ ಡಾ.ಆಕಾಶ್ ತಿಳಿಸಿದರು.

ಜಿಲ್ಲೆಯಾದ್ಯಂತ 1026 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಈ ಪೈಕಿ 765 ಘಟಕಗಳು ಸುಸ್ಥಿಯಲ್ಲಿವೆ. ಉಳಿದ 261 ಘಟಕಗಳಲ್ಲಿ 121 ದುರಸ್ತಿ ಮಾಡಿ ಸಂಬಂದ ಗ್ರಾಮ ಪಂಚಾಯಿತಿ ಹಸ್ತಾಂತರ ಮಾಡಲಾಗುವುದು. 140 ಘಟಕಗಳು ಸಂಪೂರ್ಣ ಹಾಳಾಗಿದ್ದು, ಕಾರ್ಯಚರಣೆ ನಿಲ್ಲಿಸಿವೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರು ಸಭೆಯಲ್ಲಿ ಮಾಹಿತಿ ನೀಡಿದರು.

140 ಘಟಕಗಳ ದುರಸ್ತಿ ಸಾಧ್ಯತೆಯನ್ನು ಪರಿಶೀಲಿಸಿ, ಬೇಸಿಗೆ ಆರಂಭವಾಗುವ ಮುನ್ನವೇ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಗಡುವು ನೀಡಿದರು.

ವನ್ಯಜೀವಿಗಳ ಸುರಕ್ಷತೆಗೆ ಸೂಚನೆ:

ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಐದು ಕರಡಿಗಳ ಸಾವಿಗೆ ಕಾರಣರಾದವರ ಮೇಲೆ ಕೇವಲ ಅಪರಿಚಿತ ವ್ಯಕ್ತಿಗಳಿಂದ ಸಾವು ಎಂದು ಅಪರಿಚಿತರ ಮೇಲೆ ಮಾತ್ರ ಎಫ್‍ಐಆರ್ ದಾಖಲಿಸಿರುವುದಕ್ಕೆ ಸಂಸದ ಗೋವಿಂದ ಎಂ ಕಾರಜೋಳ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ SSLC ಫಲಿತಾಂಶ ಕಡಿಮೆ | ಸಚಿವ ಡಿ.ಸುಧಾಕರ್ ಅಸಮಾಧಾನ

ಗಣಿ ಪ್ರದೇಶಗಳಲ್ಲಿ ನಡೆಯುವ ಬ್ಲಾಸ್ಟಿಂಗ್ ಅಬ್ಬರಕ್ಕೆ ಹೆದರಿ ಕರಡಿಗಳು ಸೇರಿದಂತೆ ಹಲವು ವನ್ಯಪ್ರಾಣಿಗಳು ರಸ್ತೆಗೆ ಬಂದು ಅಪಘಾತಕ್ಕೀಡಾಗುತ್ತಿವೆ. ಆದರೆ ಅಕ್ರಮ ಬ್ಲಾಸ್ಟಿಂಗ್ ತಡೆಯಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಜೋಗಿಮಟ್ಟಿ, ಮಾರಿಕಣಿವೆ, ಹಾಗೂ ವಿವಿಧ ಭಾಗದ ಸುಮಾರು 112 ಎಕರೆ ಅರಣ್ಯ ಭೂಮಿಯಲ್ಲಿ ವಿಂಡ್‍ಫೋರ್ಸ್ ಇಂಡಿಯಾ ಕಂಪನಿ ಗಾಳಿ ಯಂತ್ರಗಳನ್ನು ಅಳವಡಿಸಿದೆ. 

ಪರವಾನಿಗೆ ನವೀಕರಣಕ್ಕೆ ಶಿಫಾರಸ್ಸು ಮಾಡಿದವರು ಯಾರು. ಕೇಂದ್ರ ಸರ್ಕಾರ ಅರಣ್ಯ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ವಿಂಡ್‍ಪ್ರೊರ್ಸ್ ನಿಯಮ ಉಲ್ಲಂಘನೆಗಾಗಿ ಕೇಂದ್ರ ಸರ್ಕಾರ ರೂ.23 ಕೋಟಿ ದಂಡ ವಿಧಿಸಿದೆ. ಕಂಪನಿ ದಂಡ ಪಾವತಿಸಿದ್ದು 20 ವರ್ಷಗಳ ಅವಧಿಗೆ ಗುತ್ತಿಗೆ ಪರವಾನಿಗೆಯನ್ನು ನವೀಕರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿನ ಖಾಸಗಿ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸ್ಥಳೀಯ ಅಭಿವೃದ್ಧಿ ಮತ್ತು ಅರಣ್ಯ ಸಂರಕ್ಷಣೆಗೆ ಸರಿಯಾಗಿ ಬಳಸುತ್ತಿಲ್ಲ. ಈ ಕುರಿತು ಕಂಪನಿಗಳೊಂದಿಗೆ ಚರ್ಚಿಸುವಂತೆ ಜಿಲ್ಲಾಧಿಕಾರಿಗೆ ಸಂಸದ ಗೋವಿಂದ ಎಂ ಕಾರಜೋಳ ಸೂಚಿಸಿದರು.

ವಿದ್ಯಾರ್ಥಿಗಳಿಗೆ ಇಲಿಜ್ವರ : ಸ್ವಚ್ಛತೆ ಕಾಪಾಡಲು ತಾಕೀತು

ಐಮಂಗಲ ಹತ್ತಿರದ ಮರಡಿಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ 17 ವಿದ್ಯಾರ್ಥಿಗಳು ಇತ್ತೀಚೆಗೆ ಜ್ವರದಿಂದ ಬಳಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕ್ಷೇಮ ವಿಚಾರಿಸಿ ಹೋಗಿದ್ದರು. ರೋಗ ಪರೀಕ್ಷಾ ವರದಿಯಲ್ಲಿ ವಿದ್ಯಾರ್ಥಿಗಳು ಇಲಿಜ್ವರ (ಲೆಪ್ಟೋಸ್ಪಿರೋಸಿಸ್) ಸೋಂಕಿಗೆ ಒಳಗಾಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿರುತ್ತದೆ.  

ಇದನ್ನೂ ಓದಿ: ಜನಗಣತಿ | ವ್ಯವಸ್ಥಿತವಾಗಿ ನಡೆಸಲು ಕಾರ್ಯಯೋಜನೆ ರೂಪಿಸಿ | ಡಿಸಿ ವೆಂಕಟೇಶ್ ಸೂಚನೆ

ಇಲಿ ಅಥವಾ ಪಾರಿವಾಳಗಳಿಂದ ಸೋಂಕಿಗೆ ಒಳಗಾದರೆ ಮಾತ್ರ ಇಲಿಜ್ವರ ಬರುವ ಸಂಭವವಿರುತ್ತದೆ. ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಛತೆ ಕಾಪಾಡದಿರುವುದು ಜ್ವರ ಸಾಂಕ್ರಾಮಿಕವಾಗಿ ಉಲ್ಬಣಗೊಳ್ಳಲು ಕಾರಣವಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ಹಾಸ್ಟೆಲ್ ಗಳಿಗೆ ಭೇಟಿ ನೀಡಿ, ಅಲ್ಲಿನ ಸ್ವಚ್ಛತೆ, ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು. ದಿಶಾ ಸಮಿತಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ತಾಕೀತು ಮಾಡಿತು.

ಸಿಎಸ್‍ಆರ್ ನಿಧಿ ಬಳಕೆ ಕುರಿತು ಕಂಪನಿಗಳಿಂದ ವರದಿ :

ಜಿಲ್ಲೆಯಲ್ಲಿರುವ ಕಂಪನಿಗಳು, ಕಾರ್ಖಾನೆ, ಬ್ಯಾಂಕ್‍ಗಳು ಸೇರಿದಂತೆ ನಾನಾ ಸಂಸ್ಥೆಗಳು ಸಿ.ಎಸ್.ಆರ್. ನಿಧಿಯನ್ನು ಅವು ಕಾರ್ಯ ನಿರ್ವಹಿಸುವ ಜಿಲ್ಲೆಯಲ್ಲಿಯೇ ತಮ್ಮ ಸಂಸ್ಥೆಯ ಆದಾಯದ ಶೇ. 2 ರಷ್ಟು ಖರ್ಚು ಮಾಡಬೇಕೆಂಬ ನಿಯಮವಿದೆ. ಆದರೆ ಕೆಲ ಕಂಪನಿಗಳು ತಮ್ಮ ಕೇಂದ್ರ ಕಚೇರಿ ಇರುವ ಮುಂಬೈ ಅಥವಾ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಾನಾ ಕಾರ್ಯಗಳಿಗಾಗಿ ಬಳಕೆ ಮಾಡಿ, ಇಲ್ಲಿನ ಸಿಎಸ್‍ಆರ್ ನಿಧಿಯ ಖರ್ಚು ವೆಚ್ಚವನ್ನು ತೋರಿಸುತ್ತಿದ್ದು, ಇದರಿಂದ ಜಿಲ್ಲೆಯ ಕೆಲಸ ಕಾರ್ಯಗಳಿಗೆ ಬಳಕೆ ಮಾಡುವಲ್ಲಿ ಲೋಪವೆಸಗುತ್ತಿವೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸಭೆಯಲ್ಲಿ ಪ್ರಸ್ತಾಪಿಸಿದರು.  

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಂಸದ ಗೋವಿಂದ ಕಾರಜೋಳ ಅವರು, ಜಿಲ್ಲೆಯಲ್ಲಿ ಯಾವ ಯಾವ ಕಂಪನಿಗಳು ತಮ್ಮ ಸಿಎಸ್‍ಆರ್ ನಿಧಿಯನ್ನು ಯಾವ ಉದ್ದೇಶಕ್ಕಾಗಿ ಎಷ್ಟು ಖರ್ಚು ವೆಚ್ಚಗಳನ್ನು ಮಾಡಿವೆ ಎಂಬುದರ ಮಾಹಿತಿಯನ್ನು ಪಡೆದು, ಮುಂದಿನ ಸಭೆಯಲ್ಲಿ ಮಂಡಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಸ್ಥಿರತೆ ಕಂಡುಕೊಂಡ ರಾಶಿ ಅಡಿಕೆ ಬೆಲೆ

ಸಭೆಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳಾದ ಮನರೇಗಾ, ಪಿಎಂಶ್ರೀ, ಉಜ್ವಲ, ಪಿ.ಎಂ.ಕೆ.ಎಸ್.ವೈ, ಪಿ.ಎಂ.ವಿಶ್ವಕರ್ಮ, ಪಿ.ಎಂ.ಧನಧಾನ್ಯ ಯೋಜನೆ, ನೇರ ರೈಲು ಹಾಗೂ ರೈಲ್ವೇ ಡಬ್ಲೀಕರಣ, ಬೆಳೆನಷ್ಟ ಪರಿಹಾರ, ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಚರ್ಚಿಸಲಾಯಿತು.  

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ರೈಲ್ವೇ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು, ದಿಶಾ ಸಮಿತಿಯ ಸದಸ್ಯರುಗಳು ಉಪಸ್ಥಿರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDisha SabhaGovinda Karajolಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿಶಾ ಸಭೆ
Share This Article
Facebook Email Print
Previous Article ಆಹಾರ ಮೇಳ, ಉಚಿತ ಆರೋಗ್ಯ ತಪಾಸಣೆ ಶಿಬಿರ | ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟನೆ ಆಹಾರ ಮೇಳ, ಉಚಿತ ಆರೋಗ್ಯ ತಪಾಸಣೆ ಶಿಬಿರ | ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟನೆ 
Next Article ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ಡಾ.ಕೆ.ಟಿ.ತಿಪ್ಪೇಸ್ವಾಮಿ ಭೇಟಿ ಆಹಾರ ಸುರಕ್ಷತೆಯಲ್ಲಿ ಯಾವುದೇ ಅಸಡ್ಡೆ ಬೇಡ | ಅಧಿಕಾರಿಗಳು ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಿ | ಡಾ. ತಿಪ್ಪೇಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up